Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸುವಲ್ಲಿ...

ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸುವಲ್ಲಿ ವಚನಗಳ ಪಾತ್ರ ಪ್ರಮುಖ: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ21 Jan 2025 8:03 PM IST
share
ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸುವಲ್ಲಿ ವಚನಗಳ ಪಾತ್ರ ಪ್ರಮುಖ: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ: 12ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅಜ್ಜರ ಕಾಡುವಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಆಯೋಜಿಸಲಾದ ಶ್ರೀಶಿವಯೋಗಿ ಸಿದ್ದರಾಮೇಶ್ವರ, ಶ್ರೀಮಹಾಯೋಗಿ ವೇಮನ ಮತ್ತು ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮ ದಲ್ಲಿ ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಶ್ರೀಮಂತ-ಬಡವ, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ. ಇಂತಹ ವಚನಕಾರರ ಜಯಂತಿಗಳನ್ನು ಆಚರಿಸುವ ಮೂಲಕ ಅವರು ಗಳ ಚಿಂತನೆಗಳನ್ನು, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿವಶರಣೆಯರು ನಡೆದ ಬಂದ ಹಾದಿ ಪ್ರತಿಯೊಬ್ಬರಿಗೂ ದಾರಿದೀಪವಾಗಲಿದೆ ಎಂದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಮತ್ತು ಅಂಬಿಗರ ಚೌಡಯ್ಯನವರು ಬಸವಣ್ಣನವರ ಸಮಕಾಲೀನ ವಚನಕಾರ ರಾಗಿದ್ದರು. 12ನೇ ಶತಮಾನದಲ್ಲಿ ವಚನಕಾರರು ತಮ್ಮ ಅಗಾಧ ಅನುಭವದ ಆಧಾರದ ಮೇಲೆ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಸರಳವಾಗಿ ವಚನಗಳನ್ನು ಸೃಷ್ಠಿಸಿ, ಸಮಾಜ ಸರಿದಾರಿಯಲ್ಲಿ ಹೋಗಲು ಪ್ರಯತ್ಮ ಮಾಡಿದ್ದಾರೆ ಎಂದು ತಿಳಿಸಿದರು.

ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಉಪನ್ಯಾಸ ನೀಡಿ, ಜನಸಾಮಾನ್ಯರಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಅವರುಗಳ ಆಡು ಮಾತಿನಲ್ಲಿಯೇ ತಿಳಿಸುವ ಅನಿವಾರ್ಯತೆ ಶಿವಶರಣೆಯರಲ್ಲಿ ಇತ್ತು. ಸಾಮಾನ್ಯ ಜನರೂ ಸಹ ಭಗವಂತನ್ನು ಪೂಜಿಸಲು ಸಾಧ್ಯ ಎಂದು ವಚನಕಾರರು ತೋರಿಸಿ ಕೊಟ್ಟಿದ್ದರು ಎಂದರು.

ಮಹನೀಯರು, ದಾರ್ಶನಿಕರ ತತ್ವ ಆದರ್ಶಗಳು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿರದೆ, ಇಡೀ ಮನುಕುಲಕ್ಕೆ ಅನ್ವಯವಾಗಲಿದ್ದು, ಇವುಗಳನ್ನು ಎಲ್ಲಾ ವರ್ಗದ ಜನರು ಪಾಲಿಸಬಹುದಾಗಿದ್ದು, ಅದರಲ್ಲೂ ವಿದ್ಯಾರ್ಥಿಗಳು ವಚನಕಾರರ ಸಂದೇಶವನ್ನು ತಮ್ಮ ಬದುಕಿನಲ್ಲಿ ಮೈಗೊಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಧರ್ ಪ್ರಸಾದ್ ಕೆ. ವಹಿಸಿದ್ದರು. ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾ, ಜಿಲ್ಲಾ ಮೊಗವೀರ ಸಂಘದ ಅಧ್ಯಕ್ಷ ದಿನೇಶ್ ಎರ್ಮಾಳು, ವಿದ್ಯಾರ್ಥಿ ನಾಯಕಿಯರಾದ ನಿಷ್ಮಾ, ಪ್ರೀತಿ ಮೊದಲಾದವರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕಾತ್ಯಾಯಿನಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X