Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ...

ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ: ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ21 Jan 2025 8:06 PM IST
share
ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ: ಡಾ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ಈ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಪಂಗಳು ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆ ಮೂಲಕ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್‌ನಲ್ಲಿ ಅನುದಾನ ಮಿಸಲಿರಿಸಬೇಕು ಎಂದು ಅವರು ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆಗಳು ಪ್ರತೀ ಮೂರು ತಿಂಗಳಿಗೊಮ್ಮೆ ಬೀದಿ ನಾಯಿಗಳ ಗಣತಿ ಕಾರ್ಯ ಕೈಗೊಳ್ಳಬೇಕು. ಒಂದೊಮ್ಮೆ ತಕ್ಷಣದಲ್ಲಿ ಗಣತಿ ಕಾರ್ಯ ಕೈಗೊಳ್ಳಲು ಸಾಧ್ಯವಾಗದೆ ಇದ್ದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಪ್ರದೇಶದ ಜನ ಸಂಖ್ಯೆಯ ಶೇ.2ರಷ್ಟು ಬೀದಿ ನಾಯಿಗಳು ಇವೆ ಎಂದು ಪರಿಗಣಿಸಿ, ಒಟ್ಟು ನಾಯಿಗಳ ಅರ್ಧದಷ್ಟು ಪ್ರತೀ ವರ್ಷ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿರುವ ನಾಯಿಗಳ ಸಂಖ್ಯೆ ಎಂದು ಪರಿಗಣಿಸಬೇಕು ಎಂದರು.

ಪ್ರಾಣಿ ಹಿಂಸೆ ಪ್ರತಿಬಂಧಕ ಕಾಯ್ದೆಯನ್ವಯ ನಾಯಿಗಳ ಸಂತಾನೋತ್ಪತ್ತಿ ಮತ್ತು ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಅಂಗಡಿ ಚಟುವಟಿಕೆಗಳನ್ನು ನಡೆಸಲು ವ್ಯಕಿತಿಗಳು ಅಥವಾ ಸಂಸ್ಥೆಗಳು ಕಡ್ಡಾಯವಾಗಿ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಹಾಗೂ ಗ್ರಾಮೀಣ ಮತುತಿ ನಗರ ಮಿತಿಯ ಸ್ಥಳೀಯ ಸಂಸ್ಥೆಗಳಲ್ಲಿ ಪರವಾನಿಗೆ ಯನ್ನು ಪಡೆಯಬೇಕು ಎಂದರು.

ಕಳೆದ ಸಾಲಿನಲ್ಲಿ ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಅನುದಾನ ಕಾಯ್ದಿರಿಸಿ, ಟೆಂಡರ್ ಪ್ರಕಟಣೆಯನ್ನು ಕರೆದರೂ ಯಾವುದೇ ಏಜೆನ್ಸಿಗಳು ಬಾರದೇ ಇರುವುದರಿಂದಾಗಿ ಅನುಷ್ಠಾನ ಗೊಳಿ ಸಲು ಸಾಧ್ಯವಾಗದೇ ಇರುವುದು ಕಂಡುಬಂದಿದೆ. ಇದರ ಅನುಷ್ಠಾನಕ್ಕಾಗಿ ಸ್ಥಳೀಯ ಪ್ರಾಣಿ ದಯಾ ಸಂಘದ ಸಹಕಾರ ಅಥವಾ ಪಶು ಪಾಲನಾ ಇಲಾಖೆಯ ಸಹಕಾರದೊಂದಿಗೆ ಇವುಗಳ ಕಾರ್ಯರೂಪಕ್ಕೆ ಮುಂದಾಗಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಮಾತನಾಡಿ, ಸರಕಾರ ಪ್ರಾಣಿಗಳ ಹಿತಕ್ಕಾಗಿ ಅನೇಕ ಕಾನೂನುಗಳು ಹಾಗೂ ನಿಯಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಒಂದೊಮ್ಮೆ ಉಲ್ಲಂಘನೆ ಗೊಂಡಲ್ಲಿ ಕಾನೂನಿನ ಅನ್ವಯ ಕ್ರಮಕ್ಕೆ ಆಸ್ಪದವಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಅವುಗಳಿಗೂ ಸಹ ನಮ್ಮ ಹಾಗೆ ಭೂಮಿಯ ಮೇಲೆ ವಾಸಿಸುವ ಹಕ್ಕು ಇದೆ ಎಂದರು.

ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ.ನಾಯಕ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

1462 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ

2023-24ನೇ ಸಾಲಿನಲ್ಲಿ ಎಬಿಸಿ ಕಾರ್ಯಕ್ರಮದ ಅನ್ವಯ ಜಿಲ್ಲೆಯಲ್ಲಿ 1576 ಗಂಡು ಹಾಗೂ 1878 ಹೆಣ್ಣು ಸೇರಿದಂತೆ ಒಟ್ಟು 3454 ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ ವರೆಗೆ 481 ಗಂಡು, 981 ಹೆಣ್ಣು ಸೇರಿದಂತೆ 1462 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಮಾರ್ಚ್ ಒಳಗಾಗಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಕಳೆದ ವರ್ಷಕ್ಕಿಂತ ಹೆಚ್ಚು ಮಾಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಆಕ್ರಮಣ ಮಾಡಿ ಕಚ್ಚಿದಾಗ ಪರಿಹಾರವನ್ನು 5000 ರೂ., ಒಂದೊಮ್ಮೆ ವ್ಯಕ್ತಿಯು ಮರಣ ಹೊಂದಿದಲ್ಲಿ 5 ಲಕ್ಷ ರೂ. ಗಳನ್ನು ಸ್ಥಳೀಯ ಸಂಸ್ಥೆಗಳೇ ಸಂತ್ರಸ್ತರಿಗೆ ಅಥವಾ ವಾರಸುದಾರರಿಗೆ ಪರಿಹಾರ ಹಣವನ್ನು ನಿಯಮಾನುಸಾರ ವಿತರಿಸಬೇಕು ಎಂದು ಅವರು ಹೇಳಿದರು.

‘ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕೆರೆಕಟ್ಟೆಯ ಖಾಸಗಿಯವರು ಅಪಘಾತ, ಅನಾರೋಗ್ಯ ಸೇರಿದಂತೆ ಮತ್ತಿತ್ತರ ನ್ಯೂನ್ಯತೆ ಹೊಂದಿದ ಪ್ರಾಣಿಗಳನ್ನು ಪಾಲನೆ ಹಾಗೂ ಚಿಕಿತ್ಸೆ ನೀಡುತ್ತಿದ್ದಾರೆ. ಅವು ಸಮರ್ಪಕ ರೀತಿಯಲ್ಲಿ ಕಾನೂನಿನ ರೀತಿಯಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆಯವರು ಹಾಗೂ ಪಶು ಪಾಲನಾ ಇಲಾಖೆಯವರು ಸೂಕ್ತ ಕ್ರಮ ವಹಿಸಬೇಕು’

-ಡಾ.ವಿದ್ಯಾ ಕುಮಾರಿ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X