ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಮಣಿಪಾಲ: ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ದೆಹಲಿ ನಿವಾಸಿ ಆಕಾಶ್(24) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜ.21ರಂದು ಮುಂಜಾನೆ ಹೆರ್ಗಾದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ನಂದಿಕೂರು ಗ್ರಾಮದ ಪ್ರಜನ್(22) ಎಂಬವರು ಜ.21ರಂದು ರಾತ್ರಿ ವೇಳೆ ಮನೆಯ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





