ಸಂಗೊಳ್ಳಿ ರಾಯಣ್ಣ ಬಲಿದಾನ ದಿನ: ಪುಷ್ಪ ನಮನ

ಉಡುಪಿ, ಜ.27: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದಂದು ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪ, ದೀಪ ನಮನ ಕಾರ್ಯಕ್ರಮ ಜ.26ರಂದು ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ನಡೆಯಿತು.
ನಿವೃತ್ತ ಯೋಧ ಗಣೇಶ್ ರಾವ್, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಮಾತನಾಡಿದರು. ನಿವೃತ್ತ ಯೋಧ ದೇವೇಂದ್ರ ಪ್ರಭು, ಸತೀಶ್ ಕೊಡವೂರು, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ದ.ಕ- ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು, ಕುರುಬರ ಸಂಘದ ನಿರ್ದೇಶಕ ಬಸವರಾಜ ಕುರುಬರ, ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಡೊಳ್ಳಿನ, ಕನ್ನಡಪರ ಹೋರಾಟಗಾರ ಪ್ರಭಕರ್ ಪೂಜಾರಿ, ಗೋಪಾಲ ದೊರೆ, ಸಿದ್ದಣ್ಣ ಪೂಜಾರಿ, ಪಂಪೇಶ್, ಶರಣಪ್ಪ ಬಾರ್ಕೆರ್, ಗೋಪಾಲ ದೇವದುರ್ಗ, ನೀಲಕಂಠಯ್ಯ ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಗೌರವ ಸಲಹೆಗಾರ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಲಕ್ಷ್ಮಣ್ ಕೊಲ್ಕಾರ್ ವಂದಿಸಿದರು.







