Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇತಿಹಾಸದ ಬಲೆಗೆ ಸಿಲುಕಿದ ಭಾರತ; ಶೇಖರ...

ಇತಿಹಾಸದ ಬಲೆಗೆ ಸಿಲುಕಿದ ಭಾರತ; ಶೇಖರ ಗುಪ್ತಾ ಕಳವಳ

ಹಿರಿಯ ಪತ್ರಕರ್ತನಿಂದ ಡಾ.ಎಂ.ವಿ.ಕಾಮತ್ ದತ್ತಿ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ27 Jan 2025 9:55 PM IST
share
ಇತಿಹಾಸದ ಬಲೆಗೆ ಸಿಲುಕಿದ ಭಾರತ; ಶೇಖರ ಗುಪ್ತಾ ಕಳವಳ

ಮಣಿಪಾಲ: ಭಾರತ ಇತಿಹಾಸದ ಬಲೆಯೊಳಗೆ ಸಿಲುಕಿ ಕೊಂಡಿರುವ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿರುವ ಭಾರತದ ಖ್ಯಾತನಾಮ ಹಿರಿಯ ಪತ್ರಕರ್ತ, ಸಂಪಾದಕ ಶೇಖರ ಗುಪ್ತಾ, ಸದ್ಯ ವಿಶ್ವದೊಂದಿಗೆ ಹಂಚಿಕೊಳ್ಳಬಲ್ಲ ಯಾವುದೇ ಸಕಾರಾತ್ಮಕ ಸುದ್ದಿ ದೇಶದಲ್ಲಿಲ್ಲ ಎಂದು ಹೇಳಿದ್ದಾರೆ.

ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ಎಂಐಸಿ) ವತಿಯಿಂದ ಮಣಿಪಾಲದ ಹೊಟೇಲ್ ಫಾರ್ಚ್ಯೂನ್ ಇನ್ ವ್ಯಾಲಿವ್ಯೆನ ಸಭಾಂಗಣದಲ್ಲಿ ಆಯೋಜಿಸಲಾದ ಡಾ.ಎಂ.ವಿ.ಕಾಮತ್ ದತ್ತಿ ಉಪನ್ಯಾಸ ಮಾಲಿಕೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡುತಿದ್ದರು.

ವಿಶ್ವದಲ್ಲಿ ತನ್ನ ಮಹತ್ವದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಭಾರತಕ್ಕೆ ಎದುರಾಗಿರುವ ಸವಾಲುಗಳ ಕುರಿತಂತೆ ವಿಷದ ವಾಗಿ ಮಾತನಾಡಿದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ಅಂಕಣಕಾರ, ಲೇಖಕ ಹಾಗೂ ಟಿವಿಗಳಲ್ಲಿ ಟಾಕ್‌ಶೋಗಳನ್ನು ಪ್ರಸ್ತುತ ಪಡಿಸುವ ಶೇಖರ ಗುಪ್ತಾ, ಇದಕ್ಕೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ರಾಜಕೀಯ ಕ್ಷೇತ್ರದಲ್ಲಿ ಚುನಾವಣಾ ಲಾಭವನ್ನೇ ದೃಷ್ಟಿಯಲ್ಲಿಟ್ಟು ನಡೆಸುವ ಸಂಯೋಜನಯೇ ಪ್ರಮುಖ ಕಾರಣವೆಂದು ನುಡಿದರು.

ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲಿ ನಡೆದ ಆರ್ಥಿಕ ಸುಧಾರಣೆಗಳನ್ನು ವಿಶ್ಲೇಷಿಸಿದ ಗುಪ್ತಾ, ಭಾರತ ಅಂದು ಚೀನಾಕ್ಕೆ ಪ್ರಜಾಪ್ರಭುತ್ವವಾದಿ ಬದಲಿಯಾಗಿ ಗುರುತಿಸಿಕೊಂಡಿತ್ತು. ಆದರೆ ಇಂದು ಅದು ಬದಲಾಗಿದೆ. ಈಗ ಸಾಂಸ್ಕೃತಿಕ ಮೇಲುಗಾರಿಕೆಯ ಮೇಲೆಯೇ ಹೆಚ್ಚು ಗಮನ ಕೇಂದ್ರೀಕರಿಸಲಾಗುತ್ತಿದೆ ಎಂದು ವಿವರಿಸಿದರು.

ದೇಶದ ಸದ್ಯದ ಆರ್ಥಿಕ ಸ್ಥಿತಿಗತಿಯ ಕುರಿತಂತೆ ಕಳವಳ ವ್ಯಕ್ತಪಡಿಸಿದ ಶೇಖರ ಗುಪ್ತಾ, ದೇಶದ ವಾರ್ಷಿಕ ಪ್ರಗತಿ ದರ ಶೇ.7 ಉಳಿಸಿಕೊಳ್ಳುವ ಅಗತ್ಯವಿದೆ. ಜನಸಾಮಾನ್ಯರ ಆದಾಯದಲ್ಲಿ ಕುಸಿತ ಹಾಗೂ ಆರ್ಥಿಕ ಅಸಮಾನತೆಯ ಅಸಾಧಾರಣ ಬೆಳವಣಿಗೆ ಸಾಮಾಜಿಕವಾಗಿ ಕಂಟಕವಾಗಿ ಪರಿಣಮಿಸಬಹುದು ಎಂದು ಎಚ್ಚರಿಸಿದರು.

ಕಳೆದೊಂದು ದಶಕದಲ್ಲಿ ಭಾರತ ಅನುಭವಕ್ಕೆ ಬರುವ ಯಾವುದೇ ಪ್ರಗತಿಯನ್ನು ಸಾಧಿಸಿಲ್ಲ. ನಿರೀಕ್ಷೆಗಿಂತ ಮೊದಲೇ ‘ವಿಜಯ’ ಘೋಷಿಸುವ ಆತುರತೆಗೆ ಭಾರತ ಕಡಿವಾಣ ಹಾಕಿಕೊಳ್ಳಬೇಕಿದೆ. ಇದಕ್ಕೆ ಬದಲಾಗಿ ಧೀರ್ಘ ಕಾಲಿಕ ಯೋಜನೆ, ಗಂಭೀರವಾದ ಸ್ವಯಂ ವಿಮರ್ಶೆ, ಚಿಂತನೆ ನಡೆಸುವತ್ತ ದೇಶ ಗಮನ ಹರಿಸಬೇಕು ಎಂದರು.

ಬಡವರಿಗೆ ಸಂಪನ್ಮೂಲಗಳ ವಿತರಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿರುವ ಕುರಿತಂತೆ ಕೇಂದ್ರದ ನರೇಂದ್ರ ಮೋದಿ ಸರಕಾರವನ್ನು ಅಭಿನಂದಿಸಿದ ಸದ್ಯ ವೆಬ್‌ಪತ್ರಿಕೆ ‘ದಿ ಪ್ರಿಂಟ್’ನ ಸ್ಥಾಪಕ ಹಾಗೂ ಮುಖ್ಯ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶೇಖರ್ ಗುಪ್ತಾ, ಒಳಗೆ ಹಾಗೂ ಹೊರಗೆ ಭಾರತ ಬಲಿಷ್ಠವಾಗಿರಲು ಸಾಮಾಜಿಕವಾಗಿರುವ ಒಗ್ಗಟ್ಟೇ ಕಾರಣ ಎಂದರಲ್ಲದೇ ದೇಶದ ಈ ಒಗ್ಗಟ್ಟಿಗೆ ನಮ್ಮ ಸಂವಿಧಾನವೇ ಪ್ರಮುಖ ಕಾರಣವಾಗಿ ಎಂದು ಹೇಳಿದರು.

ಆದರೆ ಮೋದಿ ಸರಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತೀವ್ರವಾಗಿ ಟೀಕಿಸಿದ ಅವರು, ಇದೊಂದು ಅನಗತ್ಯವಾದ ಪ್ರಚೋದನೆಯಾಗಿದೆ. ಸದ್ಯಕ್ಕೆ ದೇಶಕ್ಕೆ ಅಗತ್ಯವಾಗಿರುವುದು ಗುಣಮಟ್ಟದ ಸಾರ್ವಜನಿಕ ಶಿಕ್ಷಣ ಎಂದರಲ್ಲದೇ ಈಗಿನ ಸ್ಥಿತಿಯನ್ನು ಆಘಾತಕಾರಿ ಎಂಬಷ್ಟು ಕಳಪೆಯಾಗಿದೆ ಎಂದು ಬಣ್ಣಿಸಿದರು.

ಎಂಐಸಿಯ ನಿರ್ದೇಶಕಿ ಡಾ.ಪದ್ಮಾ ರಾಣಿ ಹಾಗೂ ಮಾಹೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X