Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ...

ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಕಡ್ಡಾಯ ಪಾಲಿಸಬೇಕು: ಉಡುಪಿ ಡಿಸಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ30 Jan 2025 8:39 PM IST
share
ಮೈಕ್ರೋಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿ ಕಡ್ಡಾಯ ಪಾಲಿಸಬೇಕು: ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಕಾಲಕಾಲಕ್ಕೆ ನೀಡುವ ಎಲ್ಲಾ ಮಾರ್ಗ ಸೂಚಿಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಡಿಸಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಗುರುವಾರ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್‌ಗಳು ತಮ್ಮಿಂದ ಸಾಲ ಪಡೆದ ಗ್ರಾಹಕರಿಗೆ ಕಿರುಕುಳ ನೀಡುವ ಅನೇಕ ಪ್ರಕರಣಗಳು ಪತ್ರಿಕೆ ಗಳಲ್ಲಿ ಕೇಳಿ ಬರುತ್ತಿವೆ. ಇದಕ್ಕೆಲ್ಲಾ ಕಾರಣ ಅವುಗಳು ಆರ್‌ಬಿಐ ಮಾರ್ಗ ಸೂಚಿಗಳು ಹಾಗೂ ನಿಯಮಗಳನ್ನು ಪಾಲಿಸದೇ ಇರುವುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತವೆ ಎಂದರು.

ಮೈಕ್ರೋ ಫೈನಾನ್ಸ್‌ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಇತರೆಲ್ಲಾ ಪೂರ್ವಾ ಪರಗಳನ್ನು ಪರಿಶೀಲನೆ ಮಾಡಿ, ಅವರ ಆದಾಯದ ಶೇ.50ರಷ್ಟು ಮಾತ್ರ ಸಾಲ ನೀಡಬೇಕು. ಆದರೆ, ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಸಹ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್‌ಗಳು 3 ಲಕ್ಷ ರೂ. ವರೆಗೆ ಮಾತ್ರ ಸಾಲ ನೀಡಲು ಅವಕಾಶ ವಿದೆ. ಸಾಲ ಮರುಪಾವತಿ ಯ ಕುರಿತಂತೆ ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನನ್ನು ಉಲ್ಲಂಘಿಸಿ, ದೌರ್ಜನ್ಯ, ಕೆಟ್ಟ ಪದಗಳಲ್ಲಿ ಬೈಯುವುದು, ದಬ್ಬಾಳಿಕೆ, ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸೊಮೋಟೋ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ ಎಂದವರು ಎಚ್ಚರಿಸಿದರು.

ಅದೇ ರೀತಿ ಸಾಲ ನೀಡಿದ ಫೈನಾನ್ಸ್‌ಗಳ ವಿರುದ್ಧ ತಿರುಗಿ ಬೀಳುವುದು ಅಥವಾ ಸಾಲ ಪಡೆದವರ ಮೇಲೆ ಫೈನಾನ್ಸ್‌ ಗಳು, ಕಾನೂನು ಉಲ್ಲಂಘಿಸಿ ತಿರುಗಿ ಬಿದ್ದಲ್ಲಿ ಅಂತಹವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಸಂಬಂಧಿತ ಕಿರುಕುಳ ದೂರುಗಳನ್ನು ಕಂಟ್ರೋಲ್ ರೂಂ ಸಂಖ್ಯೆ: 0820-2574802ಕ್ಕೆ ಕಚೇರಿ ವೇಳೆಯಲ್ಲಿ ದೂರು ನೀಡಬಹುದು ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳಲ್ಲಿ ತೆಗೆದುಕೊಳ್ಳುವ, ಕೊಡುವ ವ್ಯವಹಾರಗಳು ಶಾಂತಿಯುತ ವಾಗಿ ಆಗಬೇಕು. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9 ಕ್ಕೂ ಮುನ್ನ ಸಂಜೆ 6ರ ನಂತರ ಸಾಲಗಾರರ ಮನೆಗೆ ಹೋಗಬಾರದು. ಯಾವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಒಂದೊಮ್ಮೆ ಉಲ್ಲಂಘಿಸಿದ್ದಲ್ಲಿ ಅಂಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಸಹಾಯಕ ಕಮಿಷನರ್ ಮಹೇಶ್ಚಂದ್ರ, ಲೀಡ್ ಬ್ಯಾಂಕ್ ಮೆನೇಜರ್ ಹರೀಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಜಿಲ್ಲೆಯ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೈಕ್ರೋ ಫೈನಾನ್ಸ್: 2024ರಲ್ಲಿ 17 ದೂರು ದಾಖಲು

ಮೈಕ್ರೋ ಫೈನಾನ್ಸ್‌ಗಳಿಂದ ಆದಾಯ ಸಾಮರ್ಥ್ಯ ಮೀರಿ, ಮೂರ್ನಾಲ್ಕು ಬಾರಿಯೂ ಸಾಲ ಪಡೆದವರಿದ್ದು ಸಾಲ ಕೊಡುವವರು ಹಾಗೂ ಪಡೆದವರು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈ ಮೊದಲಿದ್ದ 120ಕ್ಕೂ ಅಧಿಕ ಸಂಸ್ಥೆಗಳ ಪೈಕಿ ಹಲವು ಮುಚ್ಚಿದ್ದು ಸಭೆಗೆ 25ಜನರಷ್ಟೇ ಬಂದಿದ್ದಾರೆ, ಕಾನೂನುಬದ್ಧ ವ್ಯವಹಾರದ ಭರವಸೆ ನೀಡಿದ್ದಾರೆ ಎಂದರು.

ಯಾವುದೇ ಭದ್ರತೆ ಇಲ್ಲದೆ ಸಾಲ ನೀಡಲಾಗುತ್ತಿದೆ. 2024ರಲ್ಲಿ ಎಂಟು ದೂರುಗಳು ಸಾಲ ವಸೂಲಿ ಹಿಂಸೆ ಹಾಗೂ 9 ದೂರುಗಳು ಸಾಲಗಾರರಿಂದ ಸಾಲ ವಸೂಲಿ ಮಾಡಿ ಕೊಡುವಂತೆ ಬಂದಿದ್ದು ಎರಡು ಎಫ್‌ಐಆರ್ ದಾಖಲಾಗಿವೆ ಎಂದರು. ಎಸ್ಪಿ ಡಾ.ಅರುಣ್ ಕೆ. ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X