Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬೇಡ್ಕರ್ ಸಂವಿಧಾನದಿಂದ ಮಾತ್ರ ಜನರ...

ಅಂಬೇಡ್ಕರ್ ಸಂವಿಧಾನದಿಂದ ಮಾತ್ರ ಜನರ ರಕ್ಷಣೆ ಸಾಧ್ಯ: ನಿಕೇತ್‌ರಾಜ್ ಮೌರ್ಯ

ಹಿರಿಯಡ್ಕ ‘ಗಾಂಧಿ ಭಾರತ’ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ30 Jan 2025 9:16 PM IST
share
ಅಂಬೇಡ್ಕರ್ ಸಂವಿಧಾನದಿಂದ ಮಾತ್ರ ಜನರ ರಕ್ಷಣೆ ಸಾಧ್ಯ: ನಿಕೇತ್‌ರಾಜ್ ಮೌರ್ಯ

ಉಡುಪಿ: ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯವಾಗುತ್ತದೆ. ಆದರೆ ಈ ಸಂವಿಧಾನ ವನ್ನು ದುರ್ಬಲಗೊಳಿಸಲು ಅನೇಕ ಪ್ರಯತ್ನಗಳು ಇಂದು ನಡೆಯುತ್ತಿವೆ. ಮನು ಸಂವಿಧಾನವನ್ನು ಮತ್ತೆ ತರಲು ಹೊರಟಿದ್ದಾರೆ. ಅದರ ವಿರುದ್ಧ ಅಂಬೇಡ್ಕರ್ ಸಂವಿಧಾನ ಮಾತ್ರ ನಮ್ಮ ರಕ್ಷಿಸಲು ಸಾಧ್ಯ. ಆದುದರಿಂದ ಅಂಬೇಡ್ಕರ್ ಸಂವಿಧಾನವನ್ನು ನಮ್ಮ ಮಕ್ಕಳಿಗೆ ತಿಳಿಸಿ ಉಳಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್‌ ರಾಜ್ ಮೌರ್ಯ ಹೇಳಿದ್ದಾರೆ.

ಗಾಂಧಿ ಭಾರತ ಹಿರಿಯಡ್ಕ ಇದರ ಆಶ್ರಯದಲ್ಲಿ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧ್ಯೇಯವಾಕ್ಯದಡಿ ಹಿರಿಯಡಕದ ಶ್ರೀವೀರಭದ್ರ ದೇವಸ್ಥಾನದ ಆವರಣದಲ್ಲಿ ಗುರುವಾರ ಆಯೋಜಿಸಲಾದ ಗಾಂಧಿ ಭಾರತ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಅಂಬೇಡ್ಕರ್ ಬರೆದ ಸಂವಿಧಾನವನ್ನು ನಾವು ಉಳಿಸಿಕೊಳ್ಳಬೇಕು. ಯಾಕೆಂದರೆ ಇಂದು ನಾವು ಸಮಾನವಾಗಿ ಕೂರಲು ಸಾಧ್ಯವಾಗಿರುವುದು ಈ ಸಂವಿಧಾನದಿಂದ. ಅಂಬೇಡ್ಕರ್ ಬರೆದ ಸಂವಿಧಾನವೇ ನಮಗೆ ಸಮಾನತೆ ಕೊಟ್ಟಿದೆ. ನಮ್ಮ ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದವರು, ಮಹಿಳೆಯರು ಕೂಡ ಅಧಿಕಾರ ಪಡೆಯುವಂತಾಗಿದೆ ಎಂದು ಅವರು ತಿಳಿಸಿದರು.

ಇಂದು ದೇಶ ಸಂದಿಗ್ಧ ಸ್ಥಿತಿಯಲ್ಲಿದೆ. ಗಾಂಧಿಯನ್ನು ಕಳೆದುಕೊಂಡ ಈ ದೇಶ ಅನಾಥವಾಗಿ ಹೋಗಿದೆ. ಇಡೀ ದೇಶವನ್ನು ಜಾತಿಧರ್ಮ ಮೀರಿ ಒಂದಾಗಿಸುವಲ್ಲಿ ಗಾಂಧಿ ಹೋರಾಟ ಮಾಡಿದರು. ಈ ಸಮಾಜದಲ್ಲಿನ ಜಾತೀಯತೆ ದೂರವಾಗ ಬೇಕೆಂದು ಧ್ವನಿ ಎತ್ತಿದ್ದ ಗಾಂಧಿಯನ್ನು ಅದೇ ಧ್ವೇಷದಿಂದ ಗುಂಡಿಟ್ಟು ಕೊಲ್ಲಲಾಯಿತು. ಆ ಮೂಲಕ ನಾವು ಮಹಾನ್ ತ್ಯಾಗಿಯನ್ನು ಕಳೆದು ಕೊಂಡಿದ್ದೇವೆ ಎಂದರು.

ಚರಕವನ್ನು ತಿರುಗಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ, ಇತಿಹಾಸವನ್ನೇ ತಿಳಿದುಕೊಳ್ಳದವರು ಇಂದು ಸಂವಿಧಾನವನ್ನು ವಿರೋಧಿಸುತ್ತಿದ್ದಾರೆ. ಇವರು ಯಾರು ಕೂಡ ಸಂವಿಧಾನ ವನ್ನು ಓದಿಯೇ ಇಲ್ಲ. ಬದಲಾದ ಸಂವಿಧಾನವನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ. ನಮ್ಮ ಸಂವಿಧಾನ ಜನರಿಗೆ ನೀಡುವ ಗೌರವ ಬೇರೆ ಯಾವುದೇ ಸಂವಿಧಾನ ನೀಡಲು ಅಸಾಧ್ಯ ಎಂದರು.

ಇಡೀ ಸಂವಿಧಾನದಲ್ಲಿ ಜಾತ್ಯತೀತೆ ಅಡಕವಾಗಿದೆ. ಭಾರತಕ್ಕೆ ಇಡೀ ಜಗತ್ತಿನಲ್ಲಿ ಹೆಸರು ಬರಲು ಇಲ್ಲಿಯ ಜಾತ್ಯತೀತೆಯೇ ಮುಖ್ಯ ಕಾರಣ. ಆದುದರಿಂದ ಪ್ರತಿಯೊಬ್ಬರು ನಮ್ಮ ದೇಶದ ಇತಿಹಾಸವನ್ನು ಅರಿತುಕೊಳ್ಳ ಬೇಕು. ಈ ದೇಶ ಎಲ್ಲರಿಗೂ ಸೇರಿದ್ದಾಗಿದೆ. ನಾವು ಒಂದಾಗಿ ಹೋಗಬೇಕು. ಗಾಂಧಿಯ ಮಾನವೀಯ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳ ಬೇಕು ಎಂದು ಅವರು ಹೇಳಿದರು.

ನ್ಯಾಯವಾದಿ ಸುಧೀರ್ ಮರೋಳಿ ಮಾತನಾಡಿದರು. ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ವರೋನಿಕಾ ಕರ್ನೆಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್, ನವೀನ ಚಂದ್ರ ಸುವರ್ಣ, ರಮೇಶ್ ಕಾಂಚನ್, ಮಲ್ಪೆ ರಾಘವೇಂದ್ರ, ಇಸ್ಮಾಯಿಲ್ ಆತ್ರಾಡಿ, ಸರ್ಫುದ್ದೀನ್ ಶೇಕ್ ಮೊದಲಾದವರು ಉಪಸ್ಥಿತರಿದ್ದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಂತ ರಾವ್ ಸ್ವಾಗತಿಸಿದರು. ಸಮಾವೇಶದ ಸಂಚಾಲಕ ಉದ್ಯಾವರ ನಾಗೇಶ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಸಂವಿಧಾನ ಪೀಠಿಕೆಯನ್ನು ರಾಯ್ಸ್ ಫೆರ್ನಾಂಡಿಸ್ ಬೋಧಿಸಿದರು. ಇದಕ್ಕೂ ಮೊದಲು ದೇವಾಡಿಗ ಸಭಾಭವನದಿಂದ ಸಮಾವೇಶ ಸ್ಥಳದವರೆಗೆ ಮೆರವಣಿಗೆ ನಡೆಯಿತು.

‘ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಯುತ್ತಿದೆ. ಹಿಂದು ರಾಷ್ಟ್ರದ ಸಂವಿಧಾನ ಸಿದ್ಧ ಪಡಿಸಲಾಗಿದೆ. ನಮ್ಮ ಸಂವಿಧಾನ ನಮಗೆ ರಕ್ಷಣೆ ಕೊಟ್ಟಿದೆ ಮತ್ತು ಆರ್ಥಿಕ ಶಕ್ತಿ ನೀಡಿದೆ. ಆದುದರಿಂದ ಆ ಸಂವಿಧಾನವನ್ನು ಉಳಿಸುವ ಕಾರ್ಯ ಮಾಡಬೇಕು. ಅದಕ್ಕೆ ನಾವೆಲ್ಲ ಕಟಿಬದ್ಧರಾಗಬೇಕು. ಎರಡನೇ ಸ್ವಾತಂತ್ರ್ಯ ಹೋರಾಟದ ಮೂಲಕವಾದರೂ ಸಂವಿಧಾನವನ್ನು ಉಳಿಸುವ ಹೋರಾಟಕ್ಕೆ ನಾವೆಲ್ಲ ಸಿದ್ಧರಾಬೇಕು’

-ವಿನಯ ಕುಮಾರ್ ಸೊರಕೆ, ಮಾಜಿ ಸಚಿವರು




share
ವಾರ್ತಾಭಾರತಿ
ವಾರ್ತಾಭಾರತಿ
Next Story
X