Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ...

ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಅನಪೇಕ್ಷಿತ: ಎಐಐಇಎ ಖಂಡನೆ

ವಾರ್ತಾಭಾರತಿವಾರ್ತಾಭಾರತಿ3 Feb 2025 9:02 PM IST
share
ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಅನಪೇಕ್ಷಿತ: ಎಐಐಇಎ ಖಂಡನೆ

ಉಡುಪಿ, ಫೆ.3: ವಿಮಾ ವಲಯದಲ್ಲಿ ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಮಿತಿಯನ್ನು ಶೇ.74ರಿಂದ ಶೇ.100ಕ್ಕೆ ಹೆಚ್ಚಿಸುವುದಾಗಿ ಬಜೆಟ್ ಮಂಡನೆ ಸಂದರ್ಭದಲ್ಲಿ ವಿತ್ತ ಸಚಿವರು ಘೋಷಿಸಿದ್ದಾರೆ. ಈ ನಿರ್ಧಾರವು ಅನಗತ್ಯವಾಗಿದ್ದು, ಇದರಿಂದ ಭಾರತೀಯ ಆರ್ಥಿಕತೆಯ ಅಭಿವೃದ್ಧಿಗೆ ಅಮೂಲ್ಯ ಸಂಪನ್ಮೂಲ ಕ್ರೋಢಿಕರಣ ಮತ್ತು ದೇಶದ ನಾಗರಿಕರಿಗೆ ಪೂರೈಸುವ ಬಾಧ್ಯತೆಗಳ ಮೇಲೆ ಗಂಭೀರ ಪರಿಣಾಮಗಳನ್ನು ಬೀರಲಿದೆ ಎಂದು ಅಖಿಲ ಭಾರತ ವಿಮಾ ನೌಕರರ ಸಂಘ(ಎಐಐಇಎ) ಈ ನಿರ್ಧಾರವನ್ನು ಬಲವಾಗಿ ಖಂಡಿಸಿದ್ದು, ಈ ಕ್ರಮದ ವಿರುದ್ಧ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ಮುಂದಾಗುವುದಾಗಿ ಸಂಘ ಪ್ರಕಟಣೆಯಲ್ಲಿ ಎಚ್ಚರಿಸಿದೆ.

1999ರ ಐಆರ್‌ಡಿಎ ಮಸೂದೆ ಅಂಗೀಕಾರದೊಂದಿಗೆ ವಿಮಾ ವಲಯ ವನ್ನು ರಾಷ್ಟ್ರೀಕರಣದಿಂದ ವಿಮುಖಗೊಳಿಸ ಲಾಯಿತು. ಮಸೂದೆಯ ಮೂಲಕ ಭಾರತೀಯ ಖಾಸಗಿ ಬಂಡವಾಳವು ವಿದೇಶಿ ಕಂಪನಿಗಳ ಸಹಭಾಗಿತ್ವದಲ್ಲಿ ವಿಮಾ ಉದ್ಯಮದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಯಿತು. ಈ ಸಂದರ್ಭದಲ್ಲಿ ವಿದೇಶಿ ನೇರ ಬಂಡವಾಳದ ಮಿತಿ ಯನ್ನು ಶೇ.26ಕ್ಕೆ ಮಿತಿ ಗೊಳಿಸಲಾಗಿತ್ತು. ಮತ್ತು ಕಾಲಕ್ರಮದಲ್ಲಿ ಇದನ್ನು ಶೇ.74ಕ್ಕೆ ಏರಿಸಲಾಗಿತ್ತು.

ಸದ್ಯ ವಿದೇಶಿ ಪಾಲುದಾರರೊಂದಿಗೆ ಹೆಚ್ಚಿನ ಸಂಖ್ಯೆಯ ಖಾಸಗಿ ವಿಮಾ ಸಂಸ್ಥೆಗಳು ಜೀವವಿಮೆ ಮತ್ತು ಸಾಮಾನ್ಯ ವಿಮಾ ಉದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕಂಪೆನಿಗಳು ತಮ್ಮ ವ್ಯವಹಾರವನ್ನು ನಡೆಸಲು ಬಂಡವಾಳವು ಎಂದಿಗೂ ಅಡಚಣೆಯಾಗಿರಲಿಲ್ಲ; ಏಕೆಂದರೆ ಅವು ಉನ್ನತ ಮಟ್ಟದ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಪಾಲುದಾರಿಕೆ ಹೊಂದಿ ರುವ ದೊಡ್ಡ ವ್ಯವಹಾರ ನಡೆಸುವ ಸಂಸ್ಥೆಗಳ ಒಡೆತನದಲ್ಲಿವೆ. ಬಹುಶ: ಒಂದು ಕಂಪೆನಿಯನ್ನು ಹೊರತುಪಡಿಸಿ ಯಾವುದೇ ವಿಮಾ ಕಂಪೆನಿಯೂ ಶೇ.74 ವಿದೇಶಿ ನೇರ ಬಂಡವಾಳ ಮಿತಿಯನ್ನು ಹೇರುವ ಸಾಧ್ಯತೆಗಳಿಲ್ಲ. ವಾಸ್ತವ ವಾಗಿ ವಿಮೆಯಲ್ಲಿನ ಒಟ್ಟು ವಿದೇಶಿ ನೇರ ಬಂಡವಾಳದ ಪಾಲ್ಗೊಳ್ಳುವಿಕೆ ಸುಮಾರು ಶೇ.32 ಮಾತ್ರ. ಪರಿಸ್ಥಿತಿ ಹೀಗಿರುವಾಗ, ಸರಕಾರವು ವಿದೇಶಿ ಬಂಡವಾಳವು ಭಾರತದಲ್ಲಿ ಕಾರ್ಯನಿರ್ವಹಿಸಲು ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲು ಏಕೆ ಕ್ರಮಕೈಗೊಂಡಿದೆ ಎಂಬುದು ಆಶ್ಚರ್ಯಕರವಾಗಿದೆ ಎಂದು ಸಂಘ ಹೇಳಿಕೆಯಲ್ಲಿ ಅಚ್ಚರಿ ವ್ಯಕ್ತಪಡಿಸಿದೆ.

ಈಗ ಅಸ್ತಿತ್ವದಲ್ಲಿರುವ ವಿದೇಶಿ ಪಾಲುದಾರರು ಪ್ರತ್ಯೇಕ ಕಂಪನಿಯನ್ನು ರಚಿಸಲು ಪಾಲುದಾರಿಕೆಯಿಂದ ಹಿಂದಕ್ಕೆ ಸರಿಯಲು ನಿರ್ಧರಿಸಿದರೆ, ಈ ನಿರ್ಧಾರವು ಭಾರತೀಯ ಕಂಪನಿಗಳು ಮತ್ತು ಭಾರತದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು. ಅಸ್ತಿತ್ವದಲ್ಲಿರುವ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಪ್ರತಿಕೂಲ ಬಿಡ್‌ಗಳೂ ಸಹ ಇರಬಹುದು ಎಂದು ಹೇಳಿಕೆ ತಿಳಿಸಿದೆ.

ವಿದೇಶಿ ಬಂಡವಾಳಕ್ಕೆ ಹೆಚ್ಚಿನ ಪ್ರವೇಶ ಮತ್ತು ಸಂಪೂರ್ಣ ಸ್ವಾತಂತ್ರ್ಯ ಅನುಮತಿಸುವುದರಿಂದ ವಿಮಾ ಉದ್ದಿಮೆಯ ಕ್ರಮಬದ್ದ ಬೆಳವಣಿಯನ್ನು ಕುಂಠಿತಗೊಳಿಸಬಹುದು. ಜನರಿಗೆ ಮತ್ತು ವ್ಯವಹಾರಕ್ಕೆ ಅಗತ್ಯವಾದ ಭದ್ರತೆ ಯನ್ನು ಒದಗಿಸುವ ಬದಲು ಲಾಭದ ಮೇಲೆಯೇ ಗಮನ ಹರಿಸಬಬಹುದು ಎಂಬುದು ಅಖಿಲ ಭಾರತದ ವಿಮಾ ನೌಕರರ ಸಂಘ ಅಭಿಪ್ರಾಯಪಟ್ಟಿದೆ. ಇದು ಭಾರತೀಯ ಸಮಾಜದ ಅಂಚಿನಲ್ಲಿರುವ ವರ್ಗಗಳ ಹಿತಾಸಕ್ತಿಗಳ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ. ಮಾತ್ರವಲ್ಲ ವಿದೇಶಿ ಬಂಡವಾಳ ಎಂದಿಗೂ ದೇಶೀಯ ಉಳಿತಾಯಕ್ಕೆ ಪರ್ಯಾಯ ವಾಗಲು ಸಾಧ್ಯವಿಲ್ಲ ಎಂದಿದೆ.

ಸರಕಾರವು ಅಸ್ತಿತ್ವದಲ್ಲಿರುವ ವಿಮಾ ಕಾನೂನುಗಳಿಗೆ ತಿದ್ದುಪಡಿಗಳನ್ನು ಮಾಡುವ ಮೂಲಕ ಸಮಗ್ರ ಶಾಸನವನ್ನು ತರಲು ಉದ್ದೇಶಿಸಿದೆ ಎಂಬ ವರದಿಗಳಿವೆ. ಈ ತಿದ್ದುಪಡಿಗಳು ದೇಶವನ್ನು 1956ರ ಹಿಂದಿನ ಅಂದರೆ ಜೀವವಿಮಾ ವ್ಯವ ಹಾರದ ರಾಷ್ಟ್ರೀಕರಣ ಪೂರ್ವ ಸ್ಥಿತಿಗೆ ಕೊಂಡೊಯ್ಯಲಿದೆ. ಪ್ರಸ್ತುತ ಸರಕಾರ ವಿಮಾವಲಯವನ್ನು ಹಣಕಾಸುದಾರರು ಮತ್ತು ಬ್ಯಾಂಕರ್‌ಗಳಿಗೆ ಹಸ್ತಾಂತರಿಸುವ ಸಾಧ್ಯತೆ ಇದ್ದು, ಇದರಿಂದ ಜನರ ಉಳಿತಾಯಕ್ಕೆ ಹೆಚ್ಚಿನ ಅಪಾಯವಿದೆ ಎಂದು ಎಚ್ಚರಿಸಿದೆ.

ವಿಮೆಯಲ್ಲಿ ವಿದೇಶಿ ನೇರ ಬಂಡವಾಳದ ಮಿತಿಯನ್ನು ಹೆಚ್ಚಿಸುವ ನಿರ್ಧಾರವನ್ನು ಎಐಐಇಎ ಬಲವಾಗಿ ಪ್ರತಿಭಟಿಸಲಿದೆ. ತಕ್ಷಣ ಈ ನಿರ್ಧಾರವನ್ನು ಹಿಂದೆಗೆದುಕೊಳ್ಳುವಂತೆ ಒತ್ತಾಯಿಸಿದೆ. 1938ರ ವಿಮಾ ಕಾಯ್ದೆ, 1956ರ ಎಲ್‌ಐಸಿ ಕಾಯ್ದೆ ಮತ್ತು 1999ರ ಐಅರ್‌ಡಿಎ ಕಾಯ್ದೆ ಗಳಿಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಯ ವಿರುದ್ದವೂ ಸಂಘ ಸರಕಾರವನ್ನು ಹೇಳಿಕೆ ಯಲ್ಲಿ ಎಚ್ಚರಿಸಿದೆ. ಆರ್ಥಿಕ ನೀತಿಗಳನ್ನು ಕಾರ್ಪೋರೆಟ್ ಪಕ್ಷಪಾತ ದಿಂದ ಜನ ಕೇಂದ್ರಿತ ಕ್ರಮಗಳತ್ತ ಮರು ಹೊಂದಿಸು ವಂತೆ ಅದು ಸರಕಾರವನ್ನು ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X