ಆರೋಗ್ಯದಲ್ಲಿ ಏರುಪೇರು: ಗರ್ಭಿಣಿ ಮೃತ್ಯು

ಹೆಬ್ರಿ: ಆರೋಗ್ಯದಲ್ಲಿ ಏರುಪೇರಾಗಿ ಗರ್ಭಿಣಿಯೊಬ್ಬಳು ಮೃತಪಟ್ಟ ಘಟನೆ ಫೆ.3ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಲಕ್ಷ್ಮಿ(22) ಎಂದು ಗುರುತಿಸಲಾಗಿದೆ. ಇವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ದಾರಿ ಮಧ್ಯೆ ತೀವ್ರ ಅಸ್ವಸ್ಥಗೊಂಡ ಆಕೆ ಯನ್ನು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರು ವುದಾಗಿ ತದಿಳಿಸಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story