ಗಂಗೊಳ್ಳಿ: ಮದ್ಯ ಮಾರಾಟ ನಿಷೇಧ

ಉಡುಪಿ, ಫೆ.4: ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ಫೆಬ್ರವರಿ 4ರಿಂದ 6ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕ ಅಬ ಕಾರಿ ನಿಯಮಗಳು 1968ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯಮಾರಾಟವನ್ನು ಫೆ. 5ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರವರೆಗೆ ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.