ಮಧ್ವನವರಾತ್ರೋತ್ಸವ ಸಂಭ್ರಮ- ಸನ್ಮಾನ ಕಾರ್ಯಕ್ರಮ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಮಧ್ವನವರಾತ್ರೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳ ಮುಖ್ಯಸ್ಥರಿಗೆ ಸನ್ಮಾನ ಕಾರ್ಯಕ್ರಮ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಂಗಳವಾರ ಜರಗಿತು.
ಕಾರ್ನೂರು ಮಠದ ಮುಖ್ಯಸ್ಥ ರಾಜಭುವನೇಶ ಕಲ್ಲೂರಾಯ, ಮಂಜಿನಾಡಿ ಶ್ರೀವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕ ಜಿ.ವೆಂಕಟೇಶ್ ಭಟ್, ನಡ್ಯಂತಾಡಿ ಮಠದ ಅರ್ಚಕ ಗೋಪಾಲಕೃಷ್ಣ ಆಚಾರ್ಯ, ವರ್ಕಾಡಿ ಶ್ರೀಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯ, ಕಟ್ತಿಲ ಮಠದ ಪ್ರಧಾನ ಅರ್ಚಕ ಕೃಷ್ಣಪ್ರಸಾದ್ ಭಟ್ ಅವರನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಸನ್ಮಾನಿಸಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥ ಸ್ವಾಮೀಜಿ, ಹಿರಿಯ ವಿದ್ವಾಂಸ ಪ್ರೊ.ವ್ಯಾಸನಕೆರೆ ಪ್ರಭಂಜನಾಚಾರ್ಯ, ದಿವಾನರಾದ ಎಂ.ಪ್ರಸನ್ನ ಆಚಾರ್ಯ, ಮಹಿತೋಷ ಆಚಾರ್ಯ ಉಪಸ್ಥಿತರಿದ್ದರು. ಡಾ.ಬಿ.ಗೋಪಾಲಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.
Next Story