ಆತ್ಮಹತ್ಯೆಗೆ ಯತ್ನಿಸಿ ಕಾಲು ಮುರಿದುಕೊಂಡ ಯುವಕ

ಮಣಿಪಾಲ, ಫೆ.5: ಮಾನಸಿಕ ಖಿನ್ನತೆಯಿಂದ ಮರದಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಯುವಕನೊರ್ವ ಕಾಲು ಮುರಿದುಕೊಂಡ ಘಟನೆ ಬುಧವಾರ ನಡೆದಿದೆ.
ಆತ್ಮಹತ್ಯೆ ಯತ್ನಿಸಿದ ಅಸ್ಸಾಂ ಮೂಲದ ಯುವಕನನ್ನು ಸಮಾಜ ಸೇವಕ ವಿಶು ಶೆಟ್ಟಿ ಸಾರ್ವಜನಿಕರ ಸಹಕಾರದಿಂದ ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದ್ದನು. ಈ ವೇಳೆ ಆತನನ್ನು ಸಾರ್ವಜನಿಕರು ರಕ್ಷಿಸಿದ್ದರು.
ಬಳಿಕ ಆತ ನೇಣು ಬಿಗಿದು ಆತ್ಮಹತ್ಯೆ ನಡೆಸಲು ಪ್ರಯತ್ನಿಸಿರುವುದು ಕೂಡ ತಿಳಿದುಬಂದಿದೆ. ಇದೆಲ್ಲಾ ವಿಫಲವಾದ ನಂತರ ಮರ ಏರಿ ಅಲ್ಲಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಬಲಗಾಲಿನ ಎಲುಬು ಮುರಿತಕ್ಕೆ ಒಳಗಾಗಿದೆ. ಪ್ರಕರಣದ ಕುರಿತು ಮಣಿಪಾಲ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.