ಟಿಪ್ಪರ್ ಮರಕ್ಕೆ ಢಿಕ್ಕಿ: ಚಾಲಕ ಸ್ಥಳದಲ್ಲಿಯೇ ಮೃತ್ಯು

ಬೈಂದೂರು, ಫೆ.7: ಟಿಪ್ಪರ್ ಲಾರಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗೋಳಿಹೊಳೆ ಗ್ರಾಮದ ಹುಣಚನಿ ಜನ್ಮನೆ ಎಂಬಲ್ಲಿ ಫೆ.6ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಚಾಲಕ ಚಂದ್ರ ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಮಹಾಬಲ ಹಾಗೂ ಹನುಮಂತ ತೀವ್ರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಲ್ತೊಡು ಕಡೆಯಿಂದ ಎಲ್ಲೂರಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯು ತಿರುವು ಇಳಿಜಾರು ರಸ್ತೆಯಲ್ಲಿ ಚಾಲಕನ ಹತೋಟಿ ತಪ್ಪಿತಗ್ಗು ಪ್ರದೇಶಕ್ಕೆ ಹೋಗಿ ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಲಾರಿ ಸಂಪೂರ್ಣ ಜಖಂ ಗೊಂಡಿದ್ದು, ಒಳಗೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡ ಚಾಲಕ ಚಂದ್ರ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





