Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯೇ ಕಮ್ಯುನಿಟಿ...

ಉಡುಪಿ ಜಿಲ್ಲೆಯೇ ಕಮ್ಯುನಿಟಿ ಪೊಲೀಸಿಂಗ್‌ನ ಬುನಾದಿ: ಡಾ.ಎಂ.ಎ.ಸಲೀಂ

ವಾರ್ತಾಭಾರತಿವಾರ್ತಾಭಾರತಿ8 Feb 2025 6:11 PM IST
share
ಉಡುಪಿ ಜಿಲ್ಲೆಯೇ ಕಮ್ಯುನಿಟಿ ಪೊಲೀಸಿಂಗ್‌ನ ಬುನಾದಿ: ಡಾ.ಎಂ.ಎ.ಸಲೀಂ

ಉಡುಪಿ, ಫೆ.8: ಕಮ್ಯುನಿಟಿ ಪೊಲೀಸಿಂಗ್‌ನ ಬುನಾದಿ ಉಡುಪಿ ಜಿಲ್ಲೆಯಾಗಿದೆ. 2000ರಲ್ಲಿ ಮಹಿಳಾ ಮತ್ತು ಮಕ್ಕಳ ಸಹಾಯವಾಣಿಯನ್ನು ಇಡೀ ರಾಜ್ಯಕ್ಕೆ ಮೊದಲ ಬಾರಿಗೆ ಉಡುಪಿ ಜಿಲ್ಲೆ ಪರಿಚಯಿಸಿತು. ಇದರಿಂದ ಪೊಲೀಸರು ಮತ್ತು ಸಾರ್ವಜನಿಕ ನಡುವಿನ ಅಂತರ ಕಡಿಮೆ, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡಲು ಸಾಧ್ಯವಾಯಿತು. ಇದೊಂದು ದಿಟ್ಟ ಹೆಜ್ಜೆಯಾಗಿದ್ದು, ಇಡೀ ರಾಜ್ಯಕ್ಕೆ ಮಾದರಿಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ತರಲಾಯಿತು ಎಂದು ಬೆಂಗಳೂರು ಸಿಐಡಿಯ ಡಿಜಿಪಿ ಡಾ.ಎಂ.ಎ.ಸಲೀಂ ಹೇಳಿದ್ದಾರೆ.

ಉಡುಪಿ ಜಿಲ್ಲೆಯ 2000ನೇ ಬ್ಯಾಚಿನ ಸಿವಿಲ್ ಮತ್ತು ಡಿಎಆರ್ ಸಿಬ್ಬಂದಿ ಗಳು ಪೊಲೀಸ್ ಇಲಾಖೆಯಲ್ಲಿ 25 ವರ್ಷ ಪೂರೈಸಿದ ಪ್ರಯುಕ್ತ ಉಡುಪಿ ಮಿಷನ್ ಕಂಪೌಂಡ್‌ನ ಹಾಲ್‌ನಲ್ಲಿ ಶನಿವಾರ ಆಯೋಜಿಸಲಾದ ರಜತ ಮಹೋತ್ಸವ ಸಂಭ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಶಾಂತಿ ಸುವ್ಯವಸ್ಥೆ ಇಲ್ಲದಿದ್ದೆ ಯಾವುದೇ ಸಮಾಜ ಕೂಡ ಪ್ರಗತಿ ಕಾಣಲು ಸಾಧ್ಯ ಇಲ್ಲ. ಸಮಾಜದ ಬೆಳವಣಿಗೆಗೆ ಸುರಕ್ಷಿತ ವಾತಾವರಣ ಅತೀ ಅಗತ್ಯವಾಗಿದೆ. ಅದರಲ್ಲಿ ಪೊಲೀಸರ ಪಾತ್ರ ಬಹಳ ಮುಖ್ಯವಾಗಿದೆ. ಅದಕ್ಕೆ ಪೊಲೀಸರು ಉತ್ತಮ ರೀತಿಯ ತಬೇತಿಯನ್ನು ಪಡೆದು ಪ್ರಾಮಾಣಿಕ ಹಾಗೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಪ್ರತಿದಿನ ಸವಾಲು ಎದುರಿಸಬೇಕು. ರಾತ್ರಿ ಹಗಲು ಕರ್ತವ್ಯ ನಿರ್ವಹಿಸುವ ಪೊಲೀಸರಿಂದ ನಾವು ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ. ಪೊಲೀಸರು ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಕುಟುಂಬದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ವಹಿಸಿದ್ದರು. ಈ ಸಂದರ್ಭದಲ್ಲಿ 2000ರಲ್ಲಿ ಉಡುಪಿ ಜಿಲ್ಲಾ ಎಸ್ಪಿಯಾಗಿದ್ದ ಡಾ.ಸಲೀಂ ಹಾಗೂ ಬೆಂಗಳೂರು ಕೆಎಸ್‌ಪಿಎಸ್ ಇದರ ನಿವೃತ್ತ ಎಸ್ಪಿ ಎಂ.ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ಮಂಗಳೂರು ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಯಾಲ್, ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಯುಬಿಎಂಸಿ ಟ್ರಸ್ಟ್ ಅಸೋಸಿಯೇಶನ್ ಚೆಯರ್‌ಮೆನ್ ಜಯಪ್ರಕಾಶ್ ಸೈಮನ್ ಉಪಸ್ಥಿತರಿದ್ದರು.

2000ನೆ ಬ್ಯಾಚಿನ ಸಿವಿಲ್ ಹೆಚ್‌ಸಿ ರಾಘವೇಂದ್ರ ಸ್ವಾಗತಿಸಿದರು. ಆರ್ಮ್ಡ್ ಹೆಚ್‌ಸಿ ಶಶಿಧರ್ ಶೆಟ್ಟಿ ಹಾಗೂ ಆರ್ಮ್ಡ್ ಹೆಚ್‌ಸಿ ಮಧುಸೂಧನ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಆರ್ಮ್ಡ್ ಹೆಚ್‌ಸಿ ಶೇಖರ್ ವಂದಿಸಿದರು. ನಿವೃತ್ತ ಎಸ್ಸೈ ಮನಮೋಹನ್ ಕಾರ್ಯಕ್ರಮ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X