ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಉಡುಪಿ, ಕಾಪುವಿನಲ್ಲಿ ಬಿಜೆಪಿ ಸಂಭ್ರಮಾಚರಣೆ

ಉಡುಪಿ, ಫೆ.8: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಮುಖಂಡರಾದ ಟಿ.ಜಿ.ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ವಿಜಯಕುಮಾರ್ ಉದ್ಯಾವರ, ಶ್ಯಾಮಲಾ ಕುಂದರ್, ಸಂಧ್ಯಾ ರಮೇಶ್, ವೀಣಾ ಎಸ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾಪು ಮಂಡಲ: ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪುವಿನಲ್ಲಿ ಶನಿವಾರ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಗೋಪಾಲಕೃಷ್ಣ ರಾವ್, ಸಂದೀಪ್ ಶೆಟ್ಟಿ, ಎಂ.ಜಿ. ನಾಗೇಂದ್ರ, ನವೀನ್ ಎಸ್.ಕೆ, ನಿತಿನ್ ಮೊದಲಾದವರು ಉಪಸ್ಥಿತರಿದ್ದರು.







