ಬೈಕ್ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕಾರ್ಕಳ, ಫೆ.8: ಬೈಕೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.7ರಂದು ರಾತ್ರಿ 11ಗಂಟೆ ಸುಮಾರಿಗೆ ದೇವರಗುಡ್ಡೆ ಎಂಬಲ್ಲಿ ನಡೆದಿದೆ.
ಮೃತರನ್ನು ನಿತೇಶ (21) ಎಂದು ಗುರುತಿಸಲಾಗಿದೆ. ಇವರು ನಕ್ರೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆಗೆ ಹೋಗಿ ವಾಪಾಸ್ಸು ನಕ್ರೆ ಪೇಟೆ ಕಡೆ ತನ್ನ ಸ್ಕೂಟಿಯಲ್ಲಿ ಹೋಗುತ್ತಿದ್ದು, ಈ ವೇಳೆ ನಕ್ರೆ ಕಡೆಯಿಂದ ದೇವರಗುಡ್ಡೆ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯುತ್ತೆನ್ನಲಾಗಿದೆ.
ಇದರ ಪರಿಣಾಮ ಸ್ಕೂಟಿ ಸವಾರ ನಿತೇಶ್, ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





