Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ...

ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ

ನಗರಸಭೆಯಿಂದ ರಿಕ್ಷಾ ಚಾಲಕ ಸಭೆ: ವಾರದೊಳಗೆ ಸೂಕ್ತ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ12 Feb 2025 8:40 PM IST
share
ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ

ಉಡುಪಿ, ಫೆ.12: ನಗರದಲ್ಲಿ ಕಾರ್ಯಾಚರಿಸುತ್ತಿರುವ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ, ಮೂಲಭೂತ ಸೌಕರ್ಯ ಹಾಗೂ ಜನರಿಗೆ ಉತ್ತಮ ಸೇವೆ ನೀಡುವ ಕುರಿತು ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ವತಿಯಿಂದ ರಿಕ್ಷಾ ಚಾಲಕರ ಸಭೆಯನ್ನು ಬುಧವಾರ ನಗರಸಭೆ ಸಭಾಂಗಣದಲ್ಲಿ ನಡೆಸಲಾಯಿತು.

ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳಾದ ಶಿವಾನಂದ ಮೂಡಬೆಟ್ಟು ಮಾತನಾಡಿ, ಗ್ರಾಮೀಣ ಪ್ರದೇಶದ ವಲಯ ಎರಡರ ರಿಕ್ಷಾಗಳು ತುರ್ತು ಬಾಡಿಗೆಗೆ ನಗರಕ್ಕೆ ಬಂದರೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಸಿಎನ್‌ಜಿ ತುಂಬಿಸಲು ನಗರಕ್ಕೆ ಬರಲು ತೊಂದರೆ ಆಗುತ್ತದೆ. ವಲಯ 2ರ ರಿಕ್ಷಾಗಳು ಹಲವು ವರ್ಷಗಳಿಂದ ಇಲ್ಲೇ ಇದ್ದವು. ಇದೀಗ ನಗರಕ್ಕೆ ಬರಬಾರದು ಎಂಬುದಾಗಿ ದೌರ್ಜನ್ಯ ಮಾಡಲಾಗುತ್ತಿದೆ.ಈ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಪದಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮಾತನಾಡಿ, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 2000ರವರೆಗೆ 40 ರಿಕ್ಷಾ ನಿಲ್ದಾಣಕ್ಕೆ ಅನುಮತಿ ನೀಡಿ, ಒಂದೊಂದು ನಿಲ್ದಾಣದಲ್ಲಿ ಇಂತಿಷ್ಟು ರಿಕ್ಷಾಗಳಿಗೆ ಮಿತಿ ನಿಗದಿಪಡಿಸಲಾಗಿತ್ತು. ಇದೀಗ ರಿಕ್ಷಾಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಅದರ ನಂತರ ಅಧಿಕೃತ ಯಾವುದೇ ನಿಲ್ದಾಣಗಳು ಆಗಿಲ್ಲ. ಸದ್ಯ 60 ನಿಲ್ದಾಣ ಗಳಿದ್ದು, ಅವುಗಳಲ್ಲಿ 20 ಅನಧಿಕೃತವಾಗಿದೆ ಎಂದು ತಿಳಿಸಿದರು.

2024ರ ಫೆ.7ರವರೆಗೆ ವಲಯ ಒಂದರಲ್ಲಿ 3395 ರಿಕ್ಷಾಗಳಿದ್ದು, ಈ ಸಂಖ್ಯೆಯ ರಿಕ್ಷಾಗಳಿಗೆ ನಿಲ್ಲಲು ಇಲ್ಲಿ ನಿಲ್ದಾಣಗಳೇ ಇಲ್ಲ. ವಲಯ ಎರಡರ ಗ್ರಾಮೀಣ ಪ್ರದೇಶದಲ್ಲಿ 3643 ರಿಕ್ಷಾಗಳಿವೆ. ರಿಕ್ಷಾ ಚಾಲಕ ಮಾಲಕರ ಒಟ್ಟು ಏಳು ಯೂನಿಯನ್‌ ಗಳು ಆಗಿವೆ. ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸಭೆಯಲ್ಲಿ ಒತ್ತಾಯಿಸಿದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದ ಲ್ಲಿರಿಸಿ ಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾ ಗುವುದು. ನಗರಸಭೆ ತೆಗೆದುಕೊಳ್ಳುವ ಈ ನಿರ್ಣಯಕ್ಕೆ ಎಲ್ಲ ರಿಕ್ಷಾ ಚಾಲಕರು ಬದ್ಧರಾಗಿರಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X