ಉಡುಪಿ: ಬಿಜೆಪಿಯಿಂದ ಡಾ.ವಿ.ಎಸ್.ಆಚಾರ್ಯ ಸಂಸ್ಮರಣೆ

ಉಡುಪಿ, ಫೆ.14: ರಾಜಕೀಯ ಮುತ್ಸದ್ದಿ, ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ದಿ.ಡಾ. ವಿ.ಎಸ್. ಆಚಾರ್ಯ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಬಿಜೆಪಿ ಉಡುಪಿ ನಗರದ ವತಿಯಿಂದ ಜಿಲ್ಲಾಧಿಕಾರಿಗಳ ಸಂಕೀರ್ಣ ಬಳಿ ಇರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿಗೆ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ, ಅಶೋಕ್ ನಾಯ್ಕ್, ಕಲ್ಪನಾ ಸುಧಾಮ, ಪ್ರಮುಖರಾದ ಶೈಲೇಂದ್ರ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಮಂಜುಳಾ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.
ನಗರಸಭೆ: ಉಡುಪಿ ನಗರಸಭಾ ಕಚೇರಿಯಲ್ಲಿರುವ ಡಾ. ವಿ.ಎಸ್.ಆಚಾರ್ಯರ ಪುತ್ಥಳಿಗೆ ಶಾಸಕ ಯಶಪಾಲ್ ಸುವರ್ಣ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.





