ವ್ಯಕ್ತಿ ನಾಪತ್ತೆ

ಉಡುಪಿ, ಫೆ.15: ತಾಲೂಕಿನ ಪುತ್ತೂರು ಗ್ರಾಮದ ಗೋಪಾಲಪುರ ನಿವಾಸಿ ಚಂದ್ರಶೇಖರ ಪಾಲನ್ (52) ಎಂಬವರು ಫೆಬ್ರವರಿ 13ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
168 ಸೆಂ.ಮಿ. ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ, ಹಿಂದಿ, ಮರಾಠಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





