ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ

ಉಡುಪಿ, ಫೆ.15: ಉಡುಪಿ ತಾಲೂಕಿನಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ಸುತ್ತಮುತ್ತಲಿನ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೆಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆಯಾದ ಒಟ್ಟು 133 ಸ್ಥಳಗಳಲ್ಲಿ 26,600 ರೂ. ದಂಡ ವಸೂಲಿ ಮಾಡಲಾಯಿತು.
ದಾಳಿಯಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ, ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಟಿ.ಪಿ.ಇ.ಐ ರವೀಂದ್ರ ನಾಯ್ಕ್, ಮಣಿಪಾಲ್ ಪೋಲೀಸ್ ಠಾಣೆಯ ಎಎಸ್‌ಐ ಮನೋಹರ್, ನಗರಸಭೆಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು, ಎನ್.ಟಿ.ಸಿ.ಪಿ ವಿಭಾಗದ ಸೈಕಾಲಜಿಸ್ಟ್ ದಿನೇಶ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಮಹೇಶ್ ಉಪಸ್ಥಿತರಿದ್ದರು.
Next Story





