ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ಹೆಬ್ರಿ, ಫೆ.18: ಶಿವಪುರ ಗ್ರಾಮದ ಹರೀಶ(35) ಎಂಬವರು ಫೆ.14ರಂದು ಬೆಳಗ್ಗೆ ಕೆಲಸಕ್ಕೆ ಎಂದು ಮನೆಯಲ್ಲಿ ಹೇಳಿ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಮಲ್ಪೆತೊಟ್ಟಂನ ಶ್ರೀನಿಧಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಕಳ ತಾಲೂಕಿನ ಅಜೆಕಾರಿನ ಕೈಕಂಬ ನಿವಾಸಿ ರವಿ(38) ಎಂಬವರು ಫೆ.8ರಂದು ಹೊಟೇಲ್‌ನಿಂದ ತನ್ನ ಮನೆಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





