Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನಸಾಮಾನ್ಯರ ಅರ್ಥಿಕ ಉನ್ನತೀಕರಣಕ್ಕೆ...

ಜನಸಾಮಾನ್ಯರ ಅರ್ಥಿಕ ಉನ್ನತೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಕಾರಿ: ಎಚ್.ಎಂ ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ18 Feb 2025 9:32 PM IST
share
ಜನಸಾಮಾನ್ಯರ ಅರ್ಥಿಕ ಉನ್ನತೀಕರಣಕ್ಕೆ ಗ್ಯಾರಂಟಿ ಯೋಜನೆ ಸಹಕಾರಿ: ಎಚ್.ಎಂ ರೇವಣ್ಣ

ಉಡುಪಿ, ಫೆ.18: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಈ ಯೋಜನೆ ಗಳು ದೇಶಕ್ಕೆ ಮಾದರಿಯಾಗಿವೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಗ್ಯಾರಂಟಿ ಯೋಜನೆಯ ಜಿಲ್ಲಾ ಮಟ್ಟದ ಕಚೇರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭವಾಗಿದ್ದು, ಈಗಾಗಲೇ ಸಮಿತಿಯ ಸದಸ್ಯರಿಗೆ ಗುರುತಿನ ಚೀಟಿಯನ್ನೂ ಸಹ ನೀಡಲಾಗಿದೆ. ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರುಗಳು ತಾಲೂಕಿನ ಪ್ರತೀ ಮನೆಗೂ ಭೇಟಿ ನೀಡಿ, ಪಂಚ ಗ್ಯಾರಂಟಿಗಳು ದೊರಕಿರುವ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಒಂದು ವೇಳೆ ಯೋಜನೆಗಳು ಫಲಾನುಭವಿಗಳನ್ನು ತಲುಪುವಲ್ಲಿ ಯಾವುದೇ ನ್ಯೂನ್ಯತೆಗಳು ಇದ್ದಲ್ಲಿ ಅದನ್ನು ಪರಿಹರಿಸಿ, ವ್ಯವಸ್ಥಿತವಾಗಿ ಯೋಜನೆಗಳು ಫಲಾನುಭವಿಗಳನ್ನು ತಲುಪುವಂತೆ ಮಾಡಬೇಕು ಎಂದರು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸದ ಅರ್ಹ ಫಲಾನುಭವಿಗಳಿದ್ದರೂ ಗೃಹ ಸಾಲ ತೆಗೆದುಕೊಳ್ಳುವ ಉದ್ದೇಶದಿಂದ ಇನ್‌ಕಮ್ ಟ್ಯಾಕ್ಸ್ ರಿರ್ಟನ್ ಅಥವಾ ಜಿಎಸ್‌ಟಿ ಪಾವತಿಸುತ್ತಾರೆ ಎಂಬ ಕಾರಣದಿಂದ ಅವರ ಅರ್ಜಿಗಳನ್ನು ಪುರಸ್ಕರಿಸಿರು ವುದಿಲ್ಲ ಎಂಬ ದೂರುಗಳು ಬರುತ್ತಿವೆ. ಈ ಬಗ್ಗೆ ಪರಿಶೀಲಿಸಿ ಅರ್ಹರಿದ್ದಲ್ಲಿ ಅವರಿಗೂ ಗ್ಯಾರಂಟಿ ಯೋಜನೆ ತಲುಪಿಸ ಬೇಕೆಂದು ರೇವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಯುವನಿಧಿ ಗ್ಯಾರಂಟಿ ಯೋಜನೆಯಡಿ ಸ್ಟೈಫಂಡ್ ಪಡೆಯುತ್ತಿರುವ ಫಲಾನುಭವಿಗಳು 2 ವರ್ಷಗಳ ನಂತರ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಅವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 1.22 ಕೋಟಿ ಫಲಾನುಭವಿಗಳ ಖಾತೆಗೆ 35,180 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 2,24,348 ಫಲಾನುಭವಿಗಳ ಖಾತೆಗೆ 648.52 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ 1.63 ಕೋಟಿ ಫಲಾನುಭವಿಗಳಿಗೆ 12,589 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 3,39,305 ಫಲಾನುಭವಿಗಳಿಗೆ 342.16 ಕೋಟಿ ರೂ. ಗಳ ವಿದ್ಯುತ್ ವೆಚ್ಚವನ್ನು ಭರಿಸಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 63.68 ಕೋಟಿ ಫಲಾನುಭವಿ ಗಳ ಖಾತೆಗೆ 10,452 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 1.21 ಕೋಟಿ ಫಲಾನುಭವಿಗಳಿಗೆ 202.49 ಕೋಟಿ ರೂ.ಅನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 397 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ, 9,665 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 2.16 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, 80.45 ಕೋಟಿ ರೂ. ಭರಿಸಲಾಗಿದೆ.

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 2.51 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡು 270.17 ಕೋಟಿ ರೂ.ಗಳನ್ನು ಅಭ್ಯರ್ಥಿಗಳ ಖಾತೆಗೆ ಪಾವತಿಸಲಾಗಿದೆ. ಜಿಲ್ಲೆಯಲ್ಲಿ 3,494 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಇದಕ್ಕಾಗಿ 3.75 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮಾತನಾಡಿ, ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅಧಿಕ ಫಲಾನುಭವಿ ಗಳಿರುವುದು ಕಂಡುಬಂದಿದೆ. ಪ್ರತಿಶತಃ ನೂರರಷ್ಟು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆ ಮನೆ ಭೇಟಿ ನೀಡಿ, ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿದೆ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ಸರಕಾರ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ನಮ್ಮ ಮೇಲೆ ಕೊಟ್ಟಿದೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕೆಲವು ಸಣ್ಣ-ಪುಟ್ಟ ನ್ಯೂನ್ಯತೆಗಳಿಂದ ವಂಚಿತರಾದವರಿಗೆ ನ್ಯಾಯ ಕೊಡಿಸುವ ಕೆಲಸವಾಗಬೇಕಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್, ಗೀತಾ ವಾಗ್ಳೆ ಹಾಗೂ ಸಂತೋಷ್ ಕುಲಾಲ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಸತೀಶ್ ಜಪ್ತಿ, ತಾಲೂಕುಗಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಧಿಕಾರಿ ಗಳು, ವಿವಿಧ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X