Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ದ್ವೀಪಗಳಲ್ಲಿ ಪ್ರವಾಸೋದ್ಯಮ...

ಮಲ್ಪೆ ದ್ವೀಪಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಡಿಸಿ ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Feb 2025 7:43 PM IST
share
ಮಲ್ಪೆ ದ್ವೀಪಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಫೆ.19: ಮಲ್ಪೆ-ಪಡುಕೆರೆ ಆಸುಪಾಸಿನಲ್ಲಿರುವ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಪಡಿಸಲು ಅಗತ್ಯವಿರುವ ಮಾಸ್ಟರ್ ಪ್ಲಾನ್ ತಯಾರಿಸುವಂತೆ, ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯ ಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಲ್ಪೆ-ಪಡುಕೆರೆ ಸಮೀಪದಲ್ಲಿರುವ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕ ಸೌಂದರ್ಯವನ್ನು ಹೊಂದಿದ್ದು, ಪ್ರವಾಸಿ ತಾಣವಾಗಿ ಅಭಿವೃಧ್ಧಿ ಪಡಿಸಲು ಸೂಕ್ತವೆನಿಸಿದೆ. ಇಲ್ಲಿನ ಸಹಜ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುವಂತಿದೆ. ಈ ದ್ವೀಪಗಳಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ಬೈಂದೂರಿನ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ವಿವಿಧ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವಾಗ ಆಧುನಿಕತೆ ಯೊಂದಿಗೆ, ಆಕರ್ಷಕ ವಾಗಿರುವಂತೆ ನೋಡಿಕೊಳ್ಳಬೇಕು. ಪ್ರವಾಸಿಗರಿಗೆ ಅಗತ್ಯವಿರುವ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಎಲ್ಲಾ ಅತ್ಯಗತ್ಯ ಸೌಕರ್ಯ ಗಳನ್ನು ಕಲ್ಪಿಸಬೇಕು ಎಂದರು.

ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಅಲ್ಲಿನ ಜಲಸಾಹಸ ಚಟುವಟಿಕೆ ಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡಲು ಟೆಂಡರ್ ಕರೆಯಲಾಗಿತ್ತು. ಆದರೆ ಯಾವುದೇ ಅಭ್ಯರ್ಥಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ಕಂಡುಬಂದಿದೆ. ಕೆಲವು ಗುತ್ತಿಗೆದಾರರು ಕಡಲ ತೀರ ಹಾಗೂ ನದಿಯಲ್ಲಿಯೂ ಜಲಸಾಹಸ ಚಟುವಟಿಕೆ ಕೈಗೊಳ್ಳಲು ಹಾಗೂ ಪಾರ್ಕಿಂಗ್ ವ್ಯವ ಸ್ಥೆಯ ಸ್ಥಳ ಬದಲಾವಣೆ ಸೇರಿದಂತೆ ಕೆಲವು ವ್ಯವಸ್ಥೆಗಳನ್ನು ಕಲ್ಪಿಸಲು ಕೋರಿದ್ದಾರೆ. ಇವುಗಳನ್ನು ಪರಿಶೀಲಿಸಿ, ಸೂಕ್ತ ವ್ಯವಸ್ಥೆ ಸೇರಿದಂತೆ ಜಲಸಾಹಸ ಚಟುವಟಿಕೆ ಗಳಲ್ಲಿ ಭಾಗವಹಿಸುವವರಿಗೆ ಮೂರನೇ ವ್ಯಕ್ತಿಗಳ ವಿಮಾ ಸೌಲಭ್ಯ ಕಲ್ಪಿಸಲು ಸಹ ಷರತ್ತು ವಿಧಿಸಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶದಲ್ಲಿ ವ್ಯಾಪಾರ ಮಾಡುವ ಅಂಗಡಿಗಳು, ಕಾಟೇಜ್ ಸೇರಿದಂತೆ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೀಡಲಾದ ಸ್ಥಳದ ಬಾಡಿಗೆ ಪಾವತಿಗೆ ಕ್ರಮ ಕೈಗೊಳ್ಳಬೇಕು. ತ್ರಾಸಿ ಬೀಚ್ ಪಕ್ಕದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೀಚ್ ಉದ್ದಕ್ಕೂ ದಾರೀದೀಪ ಅಳವಡಿಸಬೇಕು ಎಂದರು.

ಸಭೆಯಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಪೌರಾಯುಕ್ತ ಉದಯ್‌ಕುಮಾರ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X