Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉದ್ಯೋಗ ಮೇಳ ನಿರುದ್ಯೋಗಿಗಳ ಆಶಾಕಿರಣ:...

ಉದ್ಯೋಗ ಮೇಳ ನಿರುದ್ಯೋಗಿಗಳ ಆಶಾಕಿರಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿಯಲ್ಲಿ ಕೌಶಲ್ಯ ರೋಜ್‌ಗಾರ್ ಮೇಳ

ವಾರ್ತಾಭಾರತಿವಾರ್ತಾಭಾರತಿ19 Feb 2025 7:53 PM IST
share
ಉದ್ಯೋಗ ಮೇಳ ನಿರುದ್ಯೋಗಿಗಳ ಆಶಾಕಿರಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉದ್ಯೋಗ ಮೇಳಗಳು ನಿರುದ್ಯೋಗಿಗಳಿಗೆ ಆಶಾಕಿರಣವಾಗಿದ್ದು, ಅವರ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗುವುದರ ಜೊತೆಗೆ ಅವರ ಆರ್ಥಿಕ ಸಬಲೀಕರಣಕ್ಕೂ ಅನುಕೂಲವಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ಅಜ್ಜರಕಾಡಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕೌಶಲ್ಯ ರೋಜ್‌ಗಾರ್ ಮೇಳ - ಉದ್ಯೋಗ ಮೇಳ-ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಭಾರತ ಜಗತ್ತಿನಲ್ಲೇ ಅತಿ ಹೆಚ್ಚು ಯುವ ಸಂಪತ್ತನ್ನು ಹೊಂದಿರುವ ದೇಶವಾಗಿದ್ದು, ಸೃಜನಾತ್ಮಕ ಕೌಶಲ್ಯಗಳನ್ನು ನಮ್ಮ ಯುವಪೀಳಿಗೆ ಹೊಂದಿವೆ. ಅವರಲ್ಲಿರುವ ಕೌಶಲ್ಯವನ್ನು ಹೊರತರುವಲ್ಲಿ ಉದ್ಯೋಗ ಮೇಳಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಅವರು ನುಡಿದರು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪೆನಿಗಳು ಉದ್ಯೋಗ ಪತ್ರ ನೀಡಿದ ಅಭ್ಯರ್ಥಿಗಳಿಗೆ ಕನಿಷ್ಠ ಹದಿನೈದು ದಿನಗಳ ಒಳಗೆ ಉದ್ಯೋಗ ನೀಡಿದಲ್ಲಿ, ಉದ್ಯೋಗ ಮೇಳಗಳು ಸಾರ್ಥಕವಾಗುತ್ತದೆ ಎಂದ ಅವರು, ಉದ್ಯೋಗಾಕಾಂಕ್ಷಿಗಳ ಅರ್ಹತೆಗೆ ಅನುಗುಣವಾಗಿ ಕೆಲಸ ಸಿಗುವಂತಾಗಲಿ ಎಂದು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದ್ದು, ಉದ್ಯೋಗ ದೊರಕುವುದೇ ಕಷ್ಟ ವಾಗಿದೆ. ಈ ನಿಟ್ಟಿನಲ್ಲಿ ಅಲ್ಲಲ್ಲಿ ಉದ್ಯೋಗ ಮೇಳಗಳ ಆಯೋಜನೆ ಅತ್ಯವಶ್ಯಕವಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗದೇ ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಸಂದರ್ಶನವನ್ನು ಎದುರಿಸಬೇಕು ಎಂದರು.

ಅಲ್ಲದೇ ಸ್ವ-ಉದ್ಯೋಗ ಮಾಡಲು ಆಸಕ್ತಿ ಹೊಂದಿರುವವರಿಗೂ ಈಗ ಸಾಕಷ್ಟು ಅವಕಾಶಗಳಿವೆ. ಸರಕಾರದ ವತಿಯಿಂದ ಸಾಲ ಸೌಲಭ್ಯ ಹಾಗೂ ಸಹಾಯಧನವನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನವನ್ನು ಯುವ ಜನತೆ ಪಡೆದು ಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಅಭ್ಯರ್ಥಿಗಳು ಉದ್ಯೋಗ ಮೇಳದ ಸಂದರ್ಶ ದಲ್ಲಿ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಮುಕ್ತವಾಗಿ ಹಂಚಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ 2022-23ನೇ ಸಾಲಿನಲ್ಲಿ ಸಿ.ಎಂ.ಕೆ.ಕೆ.ವೈ ಯೋಜನೆಯಡಿ ಸೆಲ್ಫ್ ಎಂಪ್ಲಾಯ್‌ಮೆಂಟ್ ಟೈಲರ್ ಜಾಬ್ ರೋಲ್‌ನಲ್ಲಿ ತರಬೇತಿ ಪಡೆದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಟೂಲ್‌ಕಿಟ್‌ಗಳನ್ನು ವಿತರಿಸಲಾಯಿತು.

ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ, ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಪ್ರಸಾದ್, ಉದ್ಯೋಗದಾತರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಶ್ರೀನಿವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೀಕ್ಷಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಮದಾಸ ಪ್ರಭು ವಂದಿಸಿದರು.

ಉದ್ಯೋಗ ಮೇಳದಲ್ಲಿ 2000ಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಂಡಿದ್ದು, 40ಕ್ಕೂ ಹೆಚ್ಚು ಪ್ರತಿಷ್ಠಿತ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಸಂದರ್ಶನ ನಡೆಸಿದರು.

‘ವಿವಿಧ ಇಲಾಖೆಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಕೌಶಲ್ಯಾಭಿವೃದ್ಧಿ ನಿಗಮವನ್ನು 2016ರಲ್ಲಿ ಪ್ರಾರಂಭಿಸಿದೆ. ಈ ಮೂಲಕ 16ರಿಂದ 35 ವರ್ಷದೊಳಗಿನ ಯುವಕ ಯುವತಿಯರಿಗೆ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಿ, ಉದ್ಯೋಗ ಅವಕಾಶ ಕಲ್ಪಿಸುವುದು ನಿಗಮದ ಮಹತ್ತರ ಉದ್ದೇಶವಾಗಿದೆ.’

-ಎ.ಶ್ರೀನಿವಾಸ ರಾವ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X