Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚಿತ್ರ ನಿರ್ಮಾಣದಲ್ಲಿ ನಿರ್ದೇಶಕರ...

ಚಿತ್ರ ನಿರ್ಮಾಣದಲ್ಲಿ ನಿರ್ದೇಶಕರ ತಾತ್ವಿಕ ದೃಷ್ಟಿಕೋನವೇ ಮಹತ್ವದ್ದು: ಪಿ.ಎನ್.ರಾಮಚಂದ್ರ

ವಾರ್ತಾಭಾರತಿವಾರ್ತಾಭಾರತಿ22 Feb 2025 6:53 PM IST
share
ಚಿತ್ರ ನಿರ್ಮಾಣದಲ್ಲಿ ನಿರ್ದೇಶಕರ ತಾತ್ವಿಕ ದೃಷ್ಟಿಕೋನವೇ ಮಹತ್ವದ್ದು: ಪಿ.ಎನ್.ರಾಮಚಂದ್ರ

ಮಣಿಪಾಲ, ಫೆ.22: ಚಿತ್ರ ನಿರ್ಮಾಣದಲ್ಲಿ ಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನ ಎಲ್ಲಾ ತಾಂತ್ರಿಕ ಅಂಶಗಳಿಗಿಂತ ಹೆಚ್ಚು ಮಹತ್ವದ್ದು ಮತ್ತು ಈ ದೃಷ್ಟಿಕೋನವೇ ತಾಂತ್ರಿಕ ಅಂಶಗಳು ಬಳಸಲ್ಪಡುವ ರೀತಿಯನ್ನು ನಿರ್ಧರಿಸುತ್ತವೆ ಎಂದು ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಪಿ.ಎನ್. ರಾಮಚಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜಿಸಿಪಿಎಎಸ್), ಉಡುಪಿ ಚಿತ್ರ ಸಮಾಜದ ಆಶ್ರಯದಲ್ಲಿ ಚಲನಚಿತ್ರ ನಿರ್ಮಾಣದ ಕರಕುಶಲತೆಯ ಕುರಿತು ಇತ್ತೀಚೆಗೆ ಆಯೋಜಿಸಿದ ಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.

ಪಿ.ಎನ್.ರಾಮಚಂದ್ರ ಅವರು ಚಿತ್ರ ರಚನೆಯ ವಿವಿಧ ಅಂಶಗಳ - ಚಿತ್ರಕಥೆ, ಛಾಯಾಗ್ರಹಣ, ಸಂಕಲನ, ಪಾತ್ರಗಳು ಮತ್ತು ನಟನೆ, ಧ್ವನಿ, ರಂಗಸಜ್ಜಿಕೆ ಇತ್ಯಾದಿ- ಕುರಿತು ವಿವರಿಸಿದರು. ‘ಈ ಎಲ್ಲ ತಾಂತ್ರಿಕ ಅಂಶಗಳು ಮುಖ್ಯವಾದದ್ದು, ಆದರೆ ಚಲನಚಿತ್ರ ನಿರ್ದೇಶಕರ ತಾತ್ವಿಕ ದೃಷ್ಟಿಕೋನವು ಹೆಚ್ಚು ಮುಖ್ಯವಾಗಿದೆ’ ಎಂದು ಅವರು ಸಮರ್ಥಿಸಿಕೊಂಡರು.

ತಾತ್ವಿಕ ದೃಷ್ಟಿಕೋನವನ್ನು ಚಲನಚಿತ್ರದಲ್ಲಿ ತರಲು ಎಲ್ಲಾ ತಾಂತ್ರಿಕತೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಚಲನಚಿತ್ರ ನಿರ್ದೇಶಕರ ತಾತ್ವಿಕ ನೆಲೆಯು ಚಲನಚಿತ್ರ ನಿರ್ಮಾಣದ ಕರಕುಶಲ ಸ್ವರೂಪವನ್ನು ಸಹ ನಿರ್ಧರಿಸುತ್ತದೆ ಎಂದು ಅವರು ಹೇಳಿದರು.

ಬಳಿಕ ರಾಮಚಂದ್ರರ ಇತ್ತೀಚಿನ ಚಿತ್ರ ’ಹಿಯರ್ ಓ, ಮಹಾತ್ಮ’ದ ಪ್ರದರ್ಶನವೂ ನಡೆಯಿತು. ಈ ಚಿತ್ರದ ಕುರಿತು ಸಂವಾದವೂ ನಡೆಯಿತು. ಪ್ರೊ.ಮುರಳೀಧರ ಉಪಾದ್ಯ ಹಿರಿಯಡ್ಕ, ಪ್ರೊ.ಫಣಿರಾಜ್, ಪ್ರೊ. ವರದೇಶ್ ಹಿರೇಗಂಗೆ, ಡಾ.ಶ್ರೀಕುಮಾರ್, ಉದ್ಯಾವರ ನಾಗೇಶ್ ಕುಮಾರ್, ಸಂತೋಷ್ ನಾಯಕ್ ಪಟ್ಲ ಮೊದಲಾದವರು ಸಂವಾದದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X