ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ ವಿರುದ್ಧ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14ಕೋಟಿ ರೂ. ಅಧಿಕ ಮೊತ್ತದ ಅವ್ಯವಹಾರದ ವಿರುದ್ಧ ಕ್ರಮಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಕಾರ್ಖಾನೆಯ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನವಾದ ರವಿವಾರ ಕೂಡ ಮುಂದುವರೆದಿದೆ.
ಇಂದಿನ ಧರಣಿಯಲ್ಲಿ ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾಪು ವಲಯದ ರೈತ ಮುಖಂಡರು ಭಾಗವಹಿಸಿ, ಸರಕಾರ ಕೂಡಲೇ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ತನಿಖೆಯನ್ನು ಮುಂದುವರೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಧರಣಿಗೆ ಸಂಪೂರ್ಣ ಬೆಂಬಲ ಘೋಷಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ, ಜಿಲ್ಲಾ ಕಿನಾಸ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ, ಉಪಾಧ್ಯಕ್ಷ ಶೇಖರ್ ಕೋಟ್ಯಾನ್ ಉದ್ಯಾವರ, ಕಾರ್ಯದರ್ಶಿ ಉದಯ ಹೇರೂರು, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೀರ್ತಿ ಶೆಟ್ಟಿ ಅಂಬಲಪಾಡಿ, ನರಸಿಂಹ ಪೂಜಾರಿ ಬೈಂದೂರು, ರಾಜೇಶ್ ದೇವಾಡಿಗ ಬೈಂದೂರು, ನಾಗಪ್ಪ ಕೋಠಾರಿ ವಂಡ್ಸೆ, ರವಿ ಗಾಣಿಗ ವಂಡ್ಸೆ, ಗ್ರಾಪಂ ಅಧ್ಯಕ್ಷರಾದ ಐರಿನ್ ತಾವ್ರೋ ಕಳತ್ತೂರು, ಗ್ಯಾಬ್ರಿಯಲ್ ಮಥಾಯಸ್ ಮುದರಂಗಡಿ, ವಿನ್ಸೆಂಟ್ ಡಿಸೋಜ ಎರ್ಮಾಳು, ಸೋಮಯ್ಯ ಕಾಂಚನ್, ಕೀರ್ತನ್ ಪಲಿಮಾರು ಮೊದಲಾದವರು ಉಪಸ್ಥಿತರಿದ್ದರು.







