ಯುವಕ ಆತ್ಮಹತ್ಯೆ

ಕೊಲ್ಲೂರು, ಫೆ.23: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.14ರಂದು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ ಬೆಳ್ಳಾಲ ಎಂಬವರ ಮಗ ರಾಘವೇಂದ್ರ(19) ಎಂಬವರು ಫೆ.22ರಂದು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





