Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೆಎಸ್ಸಾರ್ಟಿಸಿ ಸಾರಿಗೆ ವಿದ್ಯಾರ್ಥಿ...

ಕೆಎಸ್ಸಾರ್ಟಿಸಿ ಸಾರಿಗೆ ವಿದ್ಯಾರ್ಥಿ ಸ್ನೇಹಿ ಆಗಿರಬೇಕು: ಡಾ.ತಿಪ್ಪೇಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Feb 2025 7:49 PM IST
share
ಕೆಎಸ್ಸಾರ್ಟಿಸಿ ಸಾರಿಗೆ ವಿದ್ಯಾರ್ಥಿ ಸ್ನೇಹಿ ಆಗಿರಬೇಕು: ಡಾ.ತಿಪ್ಪೇಸ್ವಾಮಿ

ಉಡುಪಿ: ಇತ್ತೀಚೆಗೆ ಸಾರಿಗೆ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿ ಸುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ವಿದ್ಯಾರ್ಥಿ ಸ್ನೇಹಿ ಸಾರಿಗೆ ಎನಿಸಿ ಕೊಳ್ಳಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.

ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಹಾಗೂ ಕುಂದಾಪುರ ವಿಭಾಗದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಮಕ್ಕಳಿಗೆ ಶಿಕ್ಷಣ ಮೂಲಭೂತ ಹಕ್ಕು. ಕೇವಲ ಹಕ್ಕುಗಳನ್ನು ನೀಡಿದರೆ ಸಾಲದು. ಅದನ್ನು ಪಡೆಯಲು ಅಗತ್ಯವಾದ ಪೂರಕ ವ್ಯವಸ್ಥೆಗಳನ್ನು ಸಹ ಕಲ್ಪಿಸಿದಾಗ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಮಕ್ಕಳು ಸಮರ್ಪಕವಾದ ಶಿಕ್ಷಣ ಪಡೆದುಕೊಳ್ಳುವಲ್ಲಿ ಸಾರಿಗೆ ವ್ಯವಸ್ಥೆಯೂ ಬಹುಮುಖ್ಯ ಪಾತ್ರವಹಿಸುತ್ತದೆ ಎಂದವರು ಹೇಳಿದರು.

ತಮ್ಮ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ಶಾಲಾ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಅಲ್ಲಿನ ಸಮಯವನ್ನು ತಿಳಿದುಕೊಂಡು ಆ ಸಮಯಕ್ಕೆ ಸರಿಯಾದ ಸಾರಿಗೆಗಳನ್ನು ಓಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದ ಅವರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾರಿಗೆಗೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆ ದೂರುಗಳು ಬಂದಲ್ಲಿ ಶೀಘ್ರದಲ್ಲಿ ಅದನ್ನು ಪರಿಶೀಲಿಸಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ಸೇರುವ ಜಂಕ್ಷನ್‌ಗಳಲ್ಲಿ ಸಾರಿಗೆ ಸೇವೆಗಳ ಮೇಲ್ವಿಚಾರಣೆಗೆ ಸಂಚಾರ ನಿಯಂತ್ರಕರು ಅಥವಾ ಮೇಲ್ವಿಚಾರಕರನ್ನು ನಿಯೋಜಿಸಿ, ಸುಗಮ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸಬೇಕು. ತಮ್ಮ ಭಾಗದ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸಲು ನಿಗದಿತ ಬಸ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಿ ಅವರನ್ನು ಹತ್ತಿಸಿ, ಇಳಿಸಿ ಮುಂದೆ ಹೋಗುವುದರ ಜೊತೆಗೆ ವಿದ್ಯಾರ್ಥಿಗಳ ಜೊತೆಗೆ ಸೌಜನ್ಯಯುತವಾಗಿ ವರ್ತಿಸುವಂತೆ ತಿಳುವಳಿಕೆ ನೀಡಬೇಕು ಎಂದರು.

ಬಾಲಾ ನ್ಯಾಯ ಕಾಯಿದೆ ಮತು ಪೋಕ್ಸೋ ಕಾಯಿದೆ ಬಗ್ಗೆ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡ ಬೇಕು. ಅತಿ ಹೆಚ್ಚಿನ ವಿದ್ಯಾರ್ಥಿಗಳು ನಿಂತು ಪ್ರಯಾಣಿಸುವ ಸರತಿಗಳ ಬಗ್ಗೆ ವಿಭಾಗ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಹೆಚ್ಚುವರಿ ಸರತಿಗಳನ್ನು ಅಳವಡಿಸುವ ಅವಶ್ಯಕತೆ ಬಗ್ಗೆ ಪರಿಶೀಲಿಸಿ ಕ್ರಮವಹಿಸಬೇಕು ಎಂದರು.

ಪ್ರತೀ ಬಸ್‌ನಿಲ್ದಾಣದಲ್ಲಿ ಹಾಗೂ ಬಸ್‌ಗಳಲ್ಲಿ ಮಕ್ಕಳ ಸಹಾಯವಾಣಿ ಯನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು. ಅಗತ್ಯವಿದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರವನ್ನು ಪಡೆದು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳ ಸ್ನೇಹಿಯಾಗಿ ಸಾರಿಗೆ ಸೇವೆಯನ್ನು ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ, ಉಡುಪಿಯ ಸಂಚಾರ ನಿಯಂತ್ರಕರಾದ ದಿನೇಶ ಸಿ.ಕೆ, ಮುತ್ತಪ್ಪ, ಗಣಪತಿ ಪ್ರಭು ಹಾಗೂ ಅರುಣ್ ಕುಮಾರ್, ಘಟಕ ವ್ಯವಸ್ಥಾಪಕ ಅಶೋಕ ಹೆಗಡೆ, ಕುಂದಾಪುರದ ಸಂಚಾರ ನಿಯಂತ್ರಕರಾದ ಯಾದವ, ಶಂಕ್ರಪ್ಪ ದಾನಣ್ಣವರ ಹಾಗೂ ವಿಷ್ಣು ಪಟಗಾರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X