ಮುಂಬೈ ಸಿಎಸ್ಎಂಟಿಯಲ್ಲಿ ಕಾಮಗಾರಿ: ಕೊಂಕಣ ರೈಲು ಸಂಚಾರದಲ್ಲಿ ವ್ಯತ್ಯಯ

ಸಾಂದರ್ಭಿಕ ಚಿತ್ರ
ಉಡುಪಿ, ಫೆ.27: ಮುಂಬೈಯ ಸಿಎಸ್ಎಂಟಿಯ 12 ಮತ್ತು 13ನೇ ಪ್ಲಾಟ್ಫಾರಂಗಳ ವಿಸ್ತರಣೆ ಕಾಮಗಾರಿ ನಡೆಯುತ್ತಿ ರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲು ನಂ.12134 ಮಂಗಳೂರು ಜಂಕ್ಷನ್- ಮುಂಬೈ ಸಿಎಸ್ಎಂ ಎಕ್ಸ್ಪ್ರೆಸ್ ರೈಲಿನ ಇಂದಿನ ಸಂಚಾರ ಥಾಣೆ ನಿಲ್ದಾಣ ದಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ರೈಲಿನ ಫೆ.28ರ ಸಂಚಾರ ದಾದರ್ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
ಮಂಗಳೂರು ಜಂಕ್ಷನ್-ಮುಂಬೈ ಸಿಎಸ್ಎಂಟಿ ಎಕ್ಸ್ಪ್ರೆಸ್ ರೈಲಿನ ಮಾ.1ರ ಸಂಚಾರವನ್ನು ದಾದರ್ ನಿಲ್ದಾಣದಲ್ಲಿ ಮುಕ್ತಾಯಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





