Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಟ್ಲದಲ್ಲಿ ತುಳು ಲಿಪಿಯ ಕನ್ನಡ ಭಾಷಾ...

ವಿಟ್ಲದಲ್ಲಿ ತುಳು ಲಿಪಿಯ ಕನ್ನಡ ಭಾಷಾ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ28 Feb 2025 8:36 PM IST
share
ವಿಟ್ಲದಲ್ಲಿ ತುಳು ಲಿಪಿಯ ಕನ್ನಡ ಭಾಷಾ ಶಾಸನ ಪತ್ತೆ

ವಿಟ್ಲ, ಫೆ.28: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೊದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.

ಶಾಸನವನ್ನು ಎರಡು ಕಣಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ 11 ಸಾಲುಗಳು ಮತ್ತು ಇನ್ನೊಂದು ಫಲಕದಲ್ಲಿ 4 ಸಾಲುಗಳಿವೆ.

ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ (ಸಾಮಾನ್ಯ ವರ್ಷ 1879) ಪ್ರಮಾಧಿ ಸಂವತ್ಸರದ ಉತ್ತರಾಯಣದ ಬಹುಳ ಬುಧವಾರದ ಕುಂಭ ಲಗ್ನದಲ್ಲಿ ಹಾಕಲಾಗಿದೆ. ಈ ಸಂದರ್ಭದಲ್ಲಿ ವಿಟ್ಲದ ಬಕ್ರಬೆಲಿನ ನೆತ್ರಕೆರೆಯ ಮಠದಲ್ಲಿ ಶ್ರೀಗಣಪತಿ ಲಕ್ಷ್ಮೀನಾರಾಯಣ ದೇವರನ್ನು ಪ್ರತಿಷ್ಠಾಪಿಸಿರು ವುದು ಹಾಗೆಯೆ ಪ್ರತಿಷ್ಠಿತ ದೇವರ ನಿತ್ಯ ಸೇವೆಯ ವಿನಿಯೋಗಕ್ಕಾಗಿ ನಗದು ಸಹಿತ ದಾನವನ್ನು ಕುಕ್ಕಿಲದ ಪುಟ್ಟಣ ಭಟ್ಟರ ಮಗ ಈಶ್ವರ ಭಟ್ಟರು ನೀಡಿರುವುದು ಶಾಸನದಿಂದ ತಿಳಿದುಬರುತ್ತದೆ.

ಈ ಕ್ಷೇತ್ರ ಕಾರ್ಯ ಶೋಧನೆಯಲ್ಲಿ ಕುಕ್ಕೆಸುಬ್ರಹ್ಮಣ್ಯ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರದ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ, ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ಮಂಜುನಾಥ ನಂದಳಿಕೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಎನ್. ಶಂಕರನಾರಾಯಣ ಭಟ್ಟ, ಡಾ.ಎನ್. ತಿರುಮಲೇಶ್ವರ ಭಟ್ಟ, ಎನ್. ರವೀಶ, ಎನ್. ಮಹೇಶ, ಗಣೇಶ ಭಟ್, ಸುರೇಶ್ ಎನ್., ಶರ್ಮಿಳಾ, ಯು.ನಾರಾಯಣ ಭಟ್, ಮಂಜುಳಗಿರಿ ಈಶ್ವರ ಭಟ್ ಸಹಕರಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X