Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು: ಅಕ್ರಮ ಸಕ್ರಮ ಅರ್ಜಿಗಳ ಜಂಟಿ...

ಬೈಂದೂರು: ಅಕ್ರಮ ಸಕ್ರಮ ಅರ್ಜಿಗಳ ಜಂಟಿ ಸರ್ವೇಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 March 2025 5:41 PM IST
share

ಬೈಂದೂರು, ಮಾ.2: ಬೈಂದೂರು ಹೋಬಳಿಯ ಬಗರ್ ಹುಕುಂ(ಅಕ್ರಮ ಸಕ್ರಮ) ಹಾಗೂ 94ಸಿ ಬಾಕಿ ಕಡತಗಳ ವಿಲೇವಾರಿ ಸಂಬಂಧ ಬೈಂದೂರು ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಜೊತೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಪ್ರಸ್ತುತ ಬೈಂದೂರು ಹೋಬಳಿಯಲ್ಲಿ ಸಮಸ್ಯಾತ್ಮಕವಲ್ಲದ ಎಲ್ಲಾ ಅಕ್ರಮ ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡ ಲಾಗಿದೆ. 35 ಕಡತಗಳು ತಾಂತ್ರಿಕ ಕಾರಣದಿಂದ ಮಂಜೂರಾತಿಗೆ ಬಾಕಿಯಿದ್ದು, ಅದನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಡೀಮ್ಡ್ ಫಾರೆಸ್ಟ್ ಪಟ್ಟಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣದ ಸಾಕಷ್ಟು ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಅರಣ್ಯ, ಸರ್ವೇ ಹಾಗೂ ಕಂದಾಯ ಇಲಾಖೆಯ ಜಂಟಿ ಸರ್ವೇಗೆ ಈಗಾಗಲೇ ಅದರಂತೆ ನಿಗದಿ ಪಡಿಸಿದ ಕಾಲ ಮಿತಿ ಯೊಳಗೆ ಡೀಮ್ಡ್ ಫಾರೆಸ್ಟ್‌ನ ಸರ್ವೇ ನಡೆಸಿ ಮೂರು ಇಲಾಖೆಗಳ ಅಗತ್ಯ ಸಮನ್ವಯದೊಂದಿಗೆ ಬಗರ್ ಹುಕುಂ ಕಡತ ಗಳ ವಿಲೇವಾರಿಗೆ ಪೂರಕ ಕ್ರಮವಾಗ ಬೇಕು. ಬಾಕಿ ಉಳಿದ 94 ಸಿ ಅರ್ಜಿಗಳು ಸಹಾ ವಿಲೇವಾರಿ ಆಗಬೇಕು ಎಂದರು.

ಕುಮ್ಕಿ ವ್ಯಾಪ್ತಿಯಲ್ಲಿರುವ ಅರ್ಜಿಗಳ ವಿಲೇವಾರಿಗೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಸದನದಲ್ಲಿ ಸಚಿವರ ಗಮನ ಸೆಳೆಯಲಾಗುವುದು. ಬೈಂದೂರು ಹಾಗೂ ವಂಡ್ಸೆ ಹೋಬಳಿಯಲ್ಲಿ ಕುಮ್ಕಿ ಮಿತಿಯಲ್ಲಿ ಸುಮಾರು ನಮೂನೆ 50, 53 ಹಾಗೂ 57ರಲ್ಲಿ 14,968 ಅರ್ಜಿಗಳಿದ್ದು, ಆ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಭೂ ಮಂಜೂರಾತಿ ಮಾಡಲು ಇದೇ ತಿಂಗಳು ಮಾರ್ಚ್ 3ರಿಂದ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನ ಸೆಳೆಯಲಾಗುವುದು. ಆ ಮೂಲಕ ನೈಜ ರೈತಾಪಿ ವರ್ಗದ ಹಿತ ಕಾಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್, ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X