Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ: ವಾರದಿಂದ ರೈತ ಸಂಘ ಧರಣಿ...

ಬ್ರಹ್ಮಾವರ: ವಾರದಿಂದ ರೈತ ಸಂಘ ಧರಣಿ ಕುಳಿತ ಸ್ಥಳಕ್ಕೆ ಬಂದ ಡಿ.ಕೆ.ಶಿವಕುಮಾರ್

►ಮಾ.8ರಂದು ಮಾತುಕತೆಗೆ ರೈತಮುಖಂಡರಿಗೆ ಬೆಂಗಳೂರಿಗೆ ಆಹ್ವಾನ ►ನ್ಯಾಯ ದೊರಕಿಸಿಕೊಡುವ ಭರವಸೆ; ಧರಣಿ ಕೈಬಿಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ2 March 2025 7:22 PM IST
share
ಬ್ರಹ್ಮಾವರ: ವಾರದಿಂದ ರೈತ ಸಂಘ ಧರಣಿ ಕುಳಿತ ಸ್ಥಳಕ್ಕೆ ಬಂದ ಡಿ.ಕೆ.ಶಿವಕುಮಾರ್

ಬ್ರಹ್ಮಾವರ, ಮಾ.2: ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ 14 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರದ ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಕಳೆದ 9 ದಿನಗಳಿಂದ ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಅಪರಾಹ್ನ ಆಗಮಿಸಿದ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್‌ನ ಮಾಜಿ ಸಭಾಪತಿ ಪ್ರತಾತ್‌ ಚಂದ್ರ ಶೆಟ್ಟಿ ಸೇರಿ ಧರಣಿ ನಿರತ ರೈತ ಮುಖಂಡ ರೊಂದಿಗೆ ಮಾತುಕತೆ ನಡೆಸಿದರು.

ಕಾಪು ಮಾರಿಗುಡಿಗೆ ಭೇಟಿ ನೀಡಿದ ಬಳಿಕ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಬೇಕಿದ್ದ ಡಿಸಿಎಂ, ನೇರವಾಗಿ ಬ್ರಹ್ಮಾವರಕ್ಕೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ-66ರ ಬಳಿ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಬಂದು ನೇರವಾಗಿ ರೈತ ಮುಖಂಡರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ತಮ್ಮ ಮನವಿ ಪತ್ರವನ್ನು ಅರ್ಪಿಸಿದ ಜಿಲ್ಲಾ ರೈತರ ಸಂಘದ ಅಧ್ಯಕ್ಷರೂ ಆಗಿರುವ ಪ್ರತಾಪ್‌ಚಂದ್ರ ಶೆಟ್ಟಿ ಅವರು, ತಮ್ಮದೇ ಪಕ್ಷದ ಆಡಳಿತದ ಸರಕಾರದ ವಿರುದ್ಧ ಧರಣಿಗೆ ಕುಳಿತುಕೊಳ್ಳಬೇಕಾದ ಅನಿವಾರ್ಯತೆ ಕುರಿತು ವಿವರಿಸಿ, ತನಿಖೆಯಲ್ಲಿ ಆಗುತ್ತಿರುವ ಅನಗತ್ಯ ವಿಳಂಬದ ಕುರಿತು ಅಸಮಧಾನ ವ್ಯಕ್ತಪಡಿಸಿದರು.

ಪೊಲೀಸ್ ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದಿರುವ ಸಹಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆಗೆ ಪೂರ್ವಾನುಮತಿಗೆ ಬರೆದು 5-6 ತಿಂಗಳಾದರೂ ಸರಕಾರದಿಂದ ಅನುಮತಿ ದೊರಕದ ಕುರಿತು ದೂರಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ, ರೈತರಿಗಾಗುತ್ತಿರುವ ಅನ್ಯಾಯ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದು ವಿವರಿಸಿದರು.

ಈ ವೇಳೆ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರಕಾರದ ಮನ್ನಣೆ ನೀಡಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸಮಸ್ಯೆ ಬಗ್ಗೆ ನನಗೂ ಅನುಭವವಿದೆ. ನಾನು ಸಹಕಾರ ಸಚಿವನಾಗಿದ್ದಾಗ ಆಸ್ಕರ್ ಫೆರ್ನಾಂಡೀಸ್ ಅವರು ಕಾರ್ಖಾನೆಯ ಅಧ್ಯಕ್ಷರಾಗಿದ್ದರು. ಕಾರ್ಖಾನೆಗೆ ಅವರು ಸರಕಾರದ ನೆರವನ್ನು ಬಯಿಸಿದ್ದರು. ಆಗ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ 100 ಎಕರೆಗೂ ಅಧಿಕ ಬೆಳೆಬಾಳುವ ಜಾಗವಿದೆ. ಆಕಾಲದಲ್ಲಿ ಕಾರ್ಖಾನೆ ಸಿಬ್ಬಂದಿಗಳಿಗೆ ಹಣ ನೀಡಿ ಸಹಾಯ ಮಾಡಿದ್ದು ನನಗೆ ನೆನಪಿದೆ ಎಂದವರು ಅಂದಿನ ದಿನವನ್ನು ನೆನಪಿಸಿಕೊಂಡರು.

8ಕ್ಕೆ ನಿಯೋಗ ಬೆಂಗಳೂರಿಗೆ ಬನ್ನಿ: ಇಲ್ಲಿ ಟೆಂಡರ್ ಕರೆದು ಕೆಲಸ ಪ್ರಾರಂಭಿಸಬೇಕು ಎಂದು ತೀರ್ಮಾನ ವಾಗಿದೆ. ಇಲ್ಲಿ ನಡೆದಿರುವ ಅಕ್ರಮ, ಅವ್ಯವಹಾರದ ವಿರುದ್ಧ ನೀವಿಗ ಹಗಲು-ರಾತ್ರಿ ಹೋರಾಟ ನಡೆಸುತಿದ್ದೀರಿ. ಈ ನಡುವೆ ಸರಕಾರ ಸಹ ಈ ಬಗ್ಗೆ ಆದೇಶ ಹೊರಡಿಸಲು ಮುಂದಾಗಿರುವ ಮಾಹಿತಿ ಇದೆ ಎಂದು ಉಪಮುಖ್ಯಮಂತ್ರಿಗಳು, ನಾಳೆಯಿಂದ ವಿಧಾನಮಂಡಲದ ಅಧಿವೇಶನ ಪ್ರಾರಂಭಗೊಳ್ಳಲಿದ್ದು, ಮಾ.8ರ ನಂತರ ಮೂರ್ನಾಲ್ಕು ಮಂದಿ ರೈತರ ನಿಯೋಗವೊಂದು ಬೆಂಗಳೂರಿಗೆ ಬಂದರೆ ಗೃಹಸಚಿವರು ಹಾಗೂ ಸಹಕಾರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಒಂದು ಸಭೆ ನಡೆಸೋಣ ಎಂದು ಸಲಹೆ ನೀಡಿದರು.

‘ನೀವು ನನಗೆ ನೀಡಿರುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಗಮನಕ್ಕೆ ತರಲಾಗುವುದು. ಈ ಬಗ್ಗೆ ಸಭೆ ಕರೆದು ನಿಮಗೆ ಯಾವ ರೀತಿಯಲ್ಲಿ ನ್ಯಾಯ ಕೊಡಿಸಲು ಸಾಧ್ಯವೊ ಚರ್ಚೆ ಮಾಡೋಣ. ಅಧಿಕೃತ ಕಾರ್ಯಕ್ರಮ ವಿಲ್ಲದಿದ್ದರೂ ನಿಮ್ಮನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲು ಬಂದಿದ್ದೇನೆ’ ಎಂದು ಡಿಕೆಶಿ ನುಡಿದರು.

‘ನ್ಯಾಯ ಎಲ್ಲರಿಗೂ ಒಂದೇ. ನಿಮ್ಮ ಹೋರಾಟಕ್ಕೆ ನಾವು ಅಗತ್ಯ ಸಹಕಾರ ನೀಡುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ವಿಧಾನ ಪರಿಷತ್ ಸದಸ್ಯರಿಗೆ ನಾನು ಸೂಚನೆ ಕೊಡುತ್ತೇನೆ’ ಎಂದವರು ಹೇಳಿದರು.

ನಿಮ್ಮ ಹೋರಾಟಕ್ಕೆ ಜಯವಾಗಲಿ. ನಿಮಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ. ತನಿಖೆಯನ್ನು ಸಮರ್ಪಕ ರೀತಿ ಯಲ್ಲಿ ಮಾಡಬೇಕೆಂಬುದು ನಿಮ್ಮ ಒತ್ತಾಯ. ರೈತರ ಕೂಗಿಗೆ ಸರಕಾರ ಮನ್ನಣೆ ನೀಡುತ್ತದೆ. ಹೀಗಾಗಿ ಈ ಹೋರಾಟ ವನ್ನು ಇಲ್ಲಿಗೆ ನಿಲ್ಲಿಸಿ ಎಂದು ಶಿವಕುಮಾರ್ ಧರಣಿ ನಿರತರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದಲ್ಲಿ ಧರಣಿ ನಿರತ ರೈತ ಸಂಘ ಹಾಗೂ ಇತರ ರೈತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಸಿಇಓ ಪ್ರತೀಕ್ ಬಾಯಲ್ ಹಾಗೂ ಇತರರು ಉಪಸ್ಥಿತರಿದ್ದರು.

ರೈತರು, ಸಂಘಟನೆಗಳೊಂದಿಗೆ ಚರ್ಚಿಸಿ ತೀರ್ಮಾನ

ಕಳೆದ ಒಂಭತ್ತು ದಿನಗಳಿಂದ ಅಹೋರಾತ್ರಿ ನಡೆಯುತ್ತಿರುವ ಧರಣಿ ಸತ್ಯಾಗ್ರಹವನ್ನು ಕೈಬಿಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿರುವ ಮನವಿಯ ಕುರಿತಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪ್‌ಚಂದ್ರ ಶೆಟ್ಟಿ ಅವರ ಅಭಿಪ್ರಾಯವನ್ನು ಕೇಳಿದಾಗ, ಎಲ್ಲರೊಂದಿಗೆ ಚರ್ಚಿಸಿ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಉಪಮುಖ್ಯಮಂತ್ರಿಗಳು ತಮ್ಮ ಅನಿಸಿಕೆಗಳನ್ನು ವಿವರಿಸಿದ್ದಾರೆ. ನಾನೂ ನನ್ನ ಹಾಗೂ ಧರಣಿಗೆ ಕುಳಿತ ಕಾರಣಗಳನ್ನು ವಿವರಿಸಿದ್ದೇನೆ. ಇನ್ನು ರೈತ ಮುಖಂಡರು, ರೈತರು, ವಿವಿಧ ಸಂಘಟನೆಗಳು ಕುಳಿತು ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳುತ್ತೇವೆ. ನಮಗೆ ಯಾವುದೇ ದುರುದ್ದೇಶವಿಲ್ಲ. ಸರಕಾರ ನಮ್ಮೆಲ್ಲಾ ಮನವಿಗೆ ಸ್ಪಂಧಿಸಿ ಸಮಸ್ಯೆಗಳನ್ನು ಬಗೆಹರಿ ಸಿದರೆ ಯಾವುದೇ ನಿಮಷ ಈ ಸಸತ್ಯಾಗ್ರಹವನ್ನು ಕೈಬಿಡಬಹುದು. ಅದಕ್ಕೆ ಯಾವುದೇ ಕಾಲಮಿತಿಗಳಿಲ್ಲ ಎಂದು ಪ್ರತಾಪ್‌ಚಂದ್ರ ಶೆಟ್ಟಿ ತಿಳಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X