ದಸಂಸ ಮೈಸೂರು ವಿಭಾಗದ ಸಂಘಟನಾ ಸಂಚಾಲಕರಾಗಿ ಶ್ಯಾಮರಾಜ್ ಬಿರ್ತಿ

ಉಡುಪಿ, ಮಾ.5: ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳ ನ್ನೊಳಗೊಂಡ 8 ಜಿಲ್ಲೆಗಳ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗದ ಮಟ್ಟದ ಸರ್ವ ಸಧ್ಯಸರ ಸಭೆ ಮತ್ತು ದಲಿತ ಚಳುವಳಿಯ ವರ್ತಮಾನದ ಸವಾಲುಗಳು ಮತ್ತು ಮಾರ್ಗೋ ಪಾಯಗಳು ವಿಚಾರ ಸಂಕಿರಣ ಮೈಸೂರಿನ ರೋಟರಿ ಭವನದಲ್ಲಿ ಮಾ.4ರಂದು ನಡೆದ ನಡೆಯಿತು.
ದಸಂಸ ಅಂಬೇಡ್ಕರ್ ವಾದ ರಾಜ್ಯ ಪ್ರಧಾನ ಸಂಚಾಲಕ ಅಣ್ಣಾ ಮಾವಳ್ಳಿ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸುಮಾರು ಮೂರು ದಶಕಗಳಿಂದ ದಲಿತ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಉಡುಪಿ ಜಿಲ್ಲೆಯ ಕ್ರಿಯಾತ್ಮಕ ದಲಿತ ಹೋರಾಟಗಾರ ಶ್ಯಾಮರಾಜ್ ಬಿರ್ತಿ ಅವರನ್ನು ಮೈಸೂರು ವಿಭಾಗದ ಸಂಘಟನಾ ಸಂಚಾಲಕರಾಗಿ ಆಯ್ಕೆ ಮಾಡಲಾಯಿತು.
ಇವರಿಗೆ ದಸಂಸ ರಾಜ್ಯ ಸಂಘಟನಾ ಸುಂದರ ಮಾಸ್ತರ್ ಮತ್ತು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಅಭಿನಂದನೆ ಸಲ್ಲಿಸಿದ್ದಾರೆ.





