Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ| ಡಿಕೆಶಿ ವಿರುದ್ಧ ಬಿಜೆಪಿ...

ಕಾರ್ಕಳ| ಡಿಕೆಶಿ ವಿರುದ್ಧ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 March 2025 9:45 PM IST
share
ಕಾರ್ಕಳ| ಡಿಕೆಶಿ ವಿರುದ್ಧ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಕಾರ್ಕಳ: ಪ್ರವಾಸಿ ತಾಣವಾಗಿ ಪ್ರಸಿದ್ಧ ಪಡೆಯಬೇಕಿದ್ದ ಬೈಲೂರು ಪರಶುರಾಮ ಥೀಮ್‌ ಪಾರ್ಕ್‌ ವಿಚಾರವನ್ನೇ ಮುಂದಿಟ್ಟು ಬಿಜೆಪಿ 2028ರ ಚುನಾವಣೆ ಎದುರಿಸಲಿದೆ ಎಂದು ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್‌ ಶೆಟ್ಟಿ ಹೇಳಿದರು.

ಅವರು ಮಾ. 6ರಂದು ಪರಶುರಾಮ ಥೀಂ ಪಾರ್ಕ್‌ ವಿಚಾರದ ಕುರಿತು ಕಾಂಗ್ರೆಸ್‌ ಸರಕಾರದ ನಿಲುವಿನ ವಿರುದ್ಧ ಬೈಲೂರು ಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾರ್ಕಳಕ್ಕೆ ಬಂದಾಗ ಮುಂದಿನ ಚುನಾವಣೆ ಬರುವ ತನಕ‌ ಥೀಮ್ ಪಾರ್ಕ್‌ ಹಾಗೆಯೇ ಇರಲಿ. ಅದೇ ವಿಚಾರ ಮುಂದಿಟ್ಟು ಚುನಾವಣೆ ಗೆಲ್ಲೋಣ ಎಂದಿದ್ದರು. ನಿಮ್ಮ ಹಗ್ಗವನ್ನು ನಿಮ್ಮ ಕುತ್ತಿಗೆಗೆ ಹಾಕಿ, ಅದೇ ಥೀಮ್ ಪಾರ್ಕ್ ವಿಚಾರದಡಿ ನಾವು ಚುನಾವಣೆ ಗೆಲ್ಲುತ್ತೇವೆ ಎಂದು ಮಣಿರಾಜ್‌ ಶೆಟ್ಟಿ ತಿರುಗೇಟು ನೀಡಿದರು.

1972ರಿಂದ 2004ರವರೆಗೆ ಕಾರ್ಕಳದಲ್ಲಿ ಕಾಂಗ್ರೆಸ್ಸಿಗರೇ ಶಾಸಕರಾಗಿದ್ದರು. ಆ ಅವಧಿಯಲ್ಲಿ ನೀವು ಮಾಡಿದ್ದಾದರೂ ಏನು ? ಎಂದು ಪ್ರಶ್ನಿಸಿದ ಮಣಿರಾಜ್‌ ಶೆಟ್ಟಿ 2004ರಿಂದ ಪ್ರಗತಿಯ ಪರ್ವ ನಡೆದಿದೆ. ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡಿದೆ. ಬಿಜೆಪಿ ಅವಧಿಯಲ್ಲಿ ನಡೆದ ಅಭಿವೃದ್ಧಿ ಸಹಿಸದೇ ಪರಶು ರಾಮನ ಮೂರ್ತಿಯ ಅರ್ಧ ಭಾಗವನ್ನು ಕಾಂಗ್ರೆಸ್‌ನವರು ತೆಗೆದುಕೊಂಡು ಹೋದರು. ರಸ್ತೆಗೆ ಮಣ್ಣು ಹಾಕಿದರು ಎಂದು ಮಣಿರಾಜ್‌ ಶೆಟ್ಟಿ ಕಿಡಿಕಾರಿದರು.

ಬಿಜೆಪಿ ಜಿಲ್ಲಾ ವಕ್ತಾರ ಸತೀಶ್‌ ಮುಟ್ಲುಪಾಡಿ ಮಾತನಾಡಿ, ವೀರಪ್ಪ ಮೊಯ್ಲಿಯವರು ಮರೋಳಿಯವರ ಹೆಸರು ಪ್ರಸ್ತಾಪಿಸಿ ಮುಂದಿನ ಚುನಾವಣೆಯಲ್ಲಿ ಉದಯ ಶೆಟ್ಟಿ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಇಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದರು. ಕಾರ್ಕಳದ ಅಭಿವೃದ್ಧಿಗೆ, ಬಿಜೆಪಿ ಕಾರ್ಯಕರ್ತರು, ಮುಖಂಡ ರಿಗೆ ಇಷ್ಟೊಂದು ತೊಂದರೆ ನೀಡುತ್ತಿರುವ ಉದಯ ಶೆಟ್ಟಿಗೆ ಟಿಕೆಟ್‌ ಇಲ್ಲ ಅನ್ನುವುದು ಆಶ್ಚರಕರ ಎಂದು ವ್ಯಂಗ್ಯವಾಡಿದರು.

ಪರಶುರಾಮ ಥೀಮ್‌ ಪಾರ್ಕ್ ನಲ್ಲಿ ಅಷ್ಟಮಂಗಳ ಇಡಬೇಕೆಂಬ ಕಾಂಗ್ರೆಸಿಗರ ವಿಚಾರವನ್ನು ಉಲ್ಲೇಖಿ ಸಿದ ಸತೀಶ್ ಮುಟ್ಲುಪಾಡಿ ಕಾಂಗ್ರೆಸ್‌ನವರಿಗೆ ಏನಾಗಿದೆ. ಯಾಕೆ ಇಷ್ಟೊಂದು ಉಪದ್ರ ನೀಡುತ್ತಿದ್ದಾರೆ ಎನ್ನುವ ಕುರಿತು ಆರೂಢ ಪ್ರಶ್ನೆ ಕೇಳಬೇಕಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಮಾತನಾಡಿ, ಕಾಂಗ್ರೆಸ್‌ನವರಿಂದ ನಾವು ರಾಜಕಾರಣ ಕಲಿಯ ಬೇಕಿಲ್ಲ. ಕಾಂಗ್ರೆಸ್‌ ನ ನೀಚ ರಾಜಕಾರಣದ ಬಗ್ಗೆ ಜನತೆಗೆ ಮನವರಿಕೆ ಆಗಿದ್ದು ಜನರೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಸುಮಿತ್‌ ಕೌಡೂರು ಮಾತನಾಡಿ, ಕಾಂಗ್ರೆಸ್‌ನವರು ಸರಕಾರದ ಮೇಲೆ ಒತ್ತಡ ಹೇರಿ ಪರಶುರಾಮ ಥೀಮ್ ಪಾರ್ಕ್ ಪೂರ್ಣಗೊಳಿಸುವ ಕಾರ್ಯ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸರಕಾರದ ವತಿಯಿಂದ ಆ ಕೆಲಸ ಆಗದಿದ್ದಲ್ಲಿ ಬೈಲೂರಿನ ಜನತೆಯೇ ಆ ಕಾರ್ಯ ವನ್ನು ಮಾಡಲಿದ್ದಾರೆ ಎಂದರು.

ವಿಖ್ಯಾತ್ ಶೆಟ್ಟಿ, ಕಾರ್ಕಳ ಯುವ ಮೋರ್ಚಾ ಅಧ್ಯಕ್ಷ ರಾಕೇಶ್‌ ಶೆಟ್ಟಿ ಮಾತನಾಡಿದರು.

ಬಿಜೆಪಿ ನಾಯಕರಾದ ಜಯರಾಮ ಸಾಲಿಯಾನ್, ಬೋಳ ಸತೀಶ್, ಸುಹಾಸ್ ಶೆಟ್ಟಿ ಮುಟ್ಲುಪಾಡಿ, ವಿನಯಾ ಡಿ. ಬಂಗೇರ, ಮಾಲಿನಿ‌ ಜೆ. ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X