ಉಡುಪಿ| ಪ್ರತ್ಯೇಕ ಪ್ರಕರಣ: ನಾಲ್ವರು ಆತ್ಮಹತ್ಯೆ

ಉಡುಪಿ, ಮಾ.7: ವೈಯಕ್ತಿಕ ಕಾರಣದಿಂದ ಮನನೊಂದ ಕಾವೇರಿ ಎಂಬವರು ಮಾ.7ರಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು: ವಿಪರೀತ ಮಧ್ಯಪಾನ ಮಾಡುವ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶಿರ್ಲಾಲ್ ಗ್ರಾಮದ ಕಡ್ದಬೈಲು ನಿವಾಸಿ ಸಹನ್(29) ಎಂಬವರು ಮಾ.6ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಮಾನಸಿಕ ಖಿನ್ನತೆಯಿಂದ ಫೆ.15ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಲ್ಪೆಯ ಮುನೀರ್ (39) ಎಂಬವರು ಮಾ.6ರಂದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಮಗಳ ಮರಣದ ಚಿಂತೆಯಲ್ಲಿ ಖಿನ್ನತೆಗೆ ಒಳಗಾಗಿದ್ದ ಕಾಳಾವಾರ ಗ್ರಾಮದ ಪ್ರಮೀಳಾ(55) ಎಂಬವರು ಮಾ.7ರಂದು ಬೆಳಗ್ಗೆ ಕಾಳಾವರ ಗ್ರಾಮದ ಸಳ್ವಾಡಿ ಎಂಬಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.







