Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಎಸೆಸೆಲ್ಸಿ ಪರೀಕ್ಷೆಯನ್ನು...

‘ಎಸೆಸೆಲ್ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ’

ವಿದ್ಯಾರ್ಥಿಗಳಿಗೆ ಉಡುಪಿ ಡಿಸಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ7 March 2025 9:33 PM IST
share
‘ಎಸೆಸೆಲ್ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ’

ಉಡುಪಿ, ಮಾ.7: ವಿದ್ಯಾರ್ಥಿಗಳು ಮುಂಬರುವ ಎಸೆಸೆಲ್ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ, ಉತ್ತಮವಾಗಿ ಉತ್ತರಗಳನ್ನು ಬರೆಯುವಂಥ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಲಹೆ ನೀಡಿದ್ದಾರೆ.

ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಇಂದು ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸೆಸೆಲ್ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸೆಸೆಲ್ಸಿ ವಿದ್ಯಾರ್ಥಿಗಳ ಪಠ್ಯಕ್ರಮ ಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಪಕವಾಗಿ ಎದುರಿಸುವ ಕೊನೆಯ ಹಂತದಲ್ಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವ ಮಕ್ಕಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕೆಂದರು.

ಕಳೆದ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ.97ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿತ್ತು. ಈ ಬಾರಿಯೂ ಪರೀಕ್ಷಾ ಫಲಿತಾಂಶ ದಲ್ಲಿ ಪ್ರಥಮ ಸ್ಥಾನ ಪಡೆಯಲು ಪರಿಣಾಮಕಾರಿ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಸೂಚಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿ, ವಿದ್ಯಾರ್ಥಿ ಗಳು ವಿದ್ಯಾರ್ಜನೆಯ ಜೊತೆಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಆರಂಭದಿಂದಲೇ ನಿರಂತರವಾಗಿ ಅಧ್ಯಯನ ನಡೆಸಿದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗುವುದಿಲ್ಲ. ಕೊನೆಯ ಪರೀಕ್ಷಾ ದಿನಗಳಲ್ಲಿ ಓದಲು ಹೋದಾಗ ಗೊಂದಲ ಉಂಟಾಗುತ್ತವೆ. ತಾಳ್ಮೆಯಿಂದ ಓದಬೇಕು. ಸಮಸ್ಯೆಗಳಿದ್ದಲ್ಲಿ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಬಗೆಹರಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದಿರಬೇಕು. ವ್ಯಸನಗಳಿಂದ ದೂರವಿರಬೇಕು ಎಂದ ಅವರು, ಶಾಲೆಯ 100ಮೀ. ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ನಿರ್ಬಂಧವಿದೆ. ಇದು ಉಲ್ಲಂಘನೆಯಾಗದಂತೆ ಮುಖ್ಯ ಶಿಕ್ಷಕರು ಎಚ್ಚರ ವಹಿಸಬೇಕು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಸೈಂಟ್ ಸಿಸಿಲೀಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X