ಉಡುಪಿ: ಕರಾವಳಿ ಬೈಪಾಸ್ ಸಮೀಪದ ಖಾಲಿ ಜಾಗದಲ್ಲಿ ಬೆಂಕಿ ಅವಘಡ

ಉಡುಪಿ: ಕರಾವಳಿ ಬೈಪಾಸ್ ಸಮೀಪದ ಖಾಲಿ ಜಾಗದಲ್ಲಿ ಇಂದು ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿ ರುವ ಬಗ್ಗೆ ವರದಿಯಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತರವಲ್ಲಿ ಯಶಸ್ವಿಯಾಗಿದ್ದಾರೆ. ಈ ಅನಾಹುತದಿಂದ ಸಮೀಪದಲ್ಲಿರುವ ಗುಜರಿ ಅಂಗಡಿ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
Next Story





