ಹೂಡೆ ಸಾಲಿಹಾತ್‌ನಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಮಾ.8: ತೋನ್ಸೆ- ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆಯ ಫ್ಯಾಶನ್ ಡಿಸೈನ್ ವಿಭಾಗದ ಉಪನ್ಯಾಸಕಿ ಮಹೆರುನ್ನಿಸಾ ಕಮ್ರುದ್ದೀನ್ ಕಾಲೇಜಿನ ವಿದ್ಯಾರ್ಥಿನಿಯರನ್ನು ದ್ದೇಶಿಸಿ ಮತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನ ಅಬ್ದುಲ್ ಗಫ್ಫಾರ್, ಸಾಲಿಹಾತ್ ಮಹಿಳಾ ಅರಬಿಕ್ ಕಾಲೇಜು ಪ್ರಾಂಶುಪಾಲೆ ಕುಲ್ಸುಮ್ ಅಬುಬಕರ್ ಉಪಸ್ಥಿತರಿದ್ದರು.
ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿನಿ ಸಫ್ರಿನ್ ಸ್ವಾಗತಿಸಿದರು. ವಿದ್ಯಾರ್ಥಿನಿ ರಿಮ್ಶ ಹಾಗು ಮರ್ಯಮ್ ಕಾರ್ಯ ಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಹೀನ ಶ್ರಮಿನ್ ವಂದಿಸಿದರು.
Next Story





