Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತಾಹ...

ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತಾಹ ಸಿಕ್ಕಿದರೆ ಉತ್ತಮ ಸಾಧನೆ ಸಾಧ್ಯ: ಬಿಷಪ್ ಜೆರಾಲ್ಡ್ ಲೋಬೊ

ವಾರ್ತಾಭಾರತಿವಾರ್ತಾಭಾರತಿ9 March 2025 6:00 PM IST
share
ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತಾಹ ಸಿಕ್ಕಿದರೆ ಉತ್ತಮ ಸಾಧನೆ ಸಾಧ್ಯ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ : ದಿವ್ಯಾಂಗ ವ್ಯಕ್ತಿಗಳು ಎಂದೂ ಕೂಡ ಸಮಾಜಕ್ಕೆ ಹೊರೆಯಲ್ಲ. ಅವರಲ್ಲಿ ಕೂಡ ಉತ್ತಮವಾದ ಪ್ರತಿಭೆಗಳಿದ್ದು ಅದಕ್ಕೆ ಸೂಕ್ತ ಪ್ರೋತ್ಸಾಹ ಲಭಿಸಿದಾಗ ಅಂತಹ ವ್ಯಕ್ತಿಗಳು ಅತ್ಯುತ್ತಮವಾದ ಸಾಧನೆ ತೋರಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೂಡ ದಿವ್ಯಾಂಗರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಧರ್ಮಪ್ರಾಂತ್ಯದ ಕುಟುಂಬ ಆಯೋಗದ ವತಿಯಿಂದ ರವಿವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರ ದಲ್ಲಿ ಆಯೋಜಿಸಲಾದ ದಿವ್ಯಾಂಗರ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರುವ ದಿವ್ಯಾಂಗರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡು ವಂತೆ ಈಗಾಗಲೇ ಕ್ರೈಸ್ತ ಜಗದ್ಗುರು ಪೋಪ್ ಫ್ರಾನ್ಸಿಸ್ ಜಗತ್ತಿಗೆ ಕರೆ ನೀಡಿದ್ದಾರೆ. ಧರ್ಮಪ್ರಾಂತ್ಯ ಮಟ್ಟ ದಲ್ಲಿ ದಿವ್ಯಾಂಗ ಮಕ್ಕಳಿಗೆ ಕೂಡ ಉತ್ತಮ ಶಿಕ್ಷಣ ಪಡೆಯಲು ಹಾಗೂ ದಿವ್ಯಾಂಗರಿಗೆ ಸರಕಾರದಿಂದ ಲಭಿಸುವ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪಡೆಯನ್ನು ರಚಿಸಿದ್ದು ಈ ಮೂಲಕ ದಿವ್ಯಾಂಗರು ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾಭಿಮಾನದಿಂದ ಬದಕುವಂತಹ ವ್ಯವಸ್ಥೆ ಆಗಬೇಕಾಗಿದೆ ಎಂದರು.

ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಮಾತನಾಡಿ, ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿಕೊಟ್ಟರೆ ನಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತುಪಡಿಸುತ್ತಾರೆ. ಆದರೆ ಪ್ರೊತ್ಸಾಹ ಹಾಗೂ ಆರ್ಥಿಕ ಸಮಸ್ಯೆಯಿಂದಾಗಿ ಅವರಲ್ಲಿರುವ ಪ್ರತಿಭೆ ನಾಶ ಹೊಂದುತ್ತಿದೆ. ವಿಶೇಷ ಅಗತ್ಯತೆಯುಳ್ಳವರು ನಮ್ಮೊಳಗೆ ಒಬ್ಬರು ಎಂಬ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಸಂವೇದನಾಶೀಲತೆ ಗುಣದಿಂದ ಮಾತ್ರ ಇಂತವರ ಏಳಿಗೆ ಸಾಧ್ಯ ಎಂದು ತಿಳಿಸಿದರು.

75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷರಾಗಿ ೨೫ ವರ್ಷಗಳನ್ನು ಪೊರೈಸಿ ಧರ್ಮಾಧ್ಯಕ್ಷ ಅತಿ ವಂ ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ದಿವ್ಯಾಂಗರು ಜೊತೆಯಾಗಿ ಸೇರಿ ಸನ್ಮಾನಿಸಿದರು. ಮಾನಸ ವಿಶೇಷ ಶಾಲೆಯ ಮಕ್ಕಳು ಹಾಗೂ ತೊಟ್ಟಂ ಚರ್ಚಿನ ಯುವಜನರು ತಮ್ಮ ನೃತ್ಯಗಳ ಮೂಲಕ, ವಂ.ಡೆನಿಸ್ ಡೆಸಾ ಅವರ ಗಾಯನದ ಮೂಲಕ ದಿವ್ಯಾಂಗರಿಗೆ ಹುರುಪನ್ನು ತುಂಬಿದರು.

ಕರ್ನಾಟಕ ಪ್ರಾಂತೀಯ ದಿವ್ಯಾಂಗರ ಆಯೋಗದ ಕಾರ್ಯದರ್ಶಿ ಎಸ್ತೆರ್ ಡಿಸೋಜಾ, ಅನುಗ್ರಹ ಪಾಲನಾ ಕೆಂದ್ರದ ನಿರ್ದೇಶಕ ಹಾಗೂ ಕಥೊಲಿಕ ಶಿಕ್ಷಣ ಸೊಸೈಟಿ ಉಡುಪಿ ಧರ್ಮಪ್ರಾಂತ್ಯದ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ, ಕುಟುಂಬ ಆಯೋಗದ ನಿರ್ದೇಶಕ ವಂ.ಡಾ.ರೋಶನ್ ಡಿಸೋಜ, ಸಂಯೋಜಕಿ ಸಿಸ್ಟರ್ ವಿನ್ನಿ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ, ಆರೋಗ್ಯ ಆಯೋಗದ ನಿರ್ದೇಶಕ ಡಾ.ಎಡ್ವರ್ಡ್ ಲೋಬೊ, ಬೈಬಲ್ ಆಯೋಗದ ನಿರ್ದೇಶಕ ವಂ.ಸಿರಿಲ್ ಲೋಬೊ, ಉಜ್ವಾಡ್ ಪತ್ರಿಕೆಯ ಸಂಪಾದಕ ವಂ.ಆಲ್ವಿನ್ ಉಪಸ್ಥಿತರಿದ್ದರು. ಕುಟುಂಬ ಆಯೋಗದ ನಿರ್ದೇಶಕ ಲೆಸ್ಲಿ ಆರೋಜಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X