ಕಸಾಪ ಯಾರ ಸ್ವಂತ ಸ್ವತ್ತು ಅಲ್ಲ: ವಸಂತಿ ಶೆಟ್ಟಿ

ಉಡುಪಿ, ಮಾ.9: ಕಸಾಪ ಯಾರ ಸ್ವಂತ ಸ್ವತ್ತು ಅಲ್ಲ. ಅದು ನಮ್ಮೆಲ್ಲರ ಸೊತ್ತು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಎಲ್ಲರನ್ನು ಸಮಾನ ವೇದಿಕೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇರಬೇಕು ಎಂದು ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು.
ಮುಖ್ಯ ಅತಿಥಿಯಾಗಿ ವಿದುಷಿ ಪ್ರತಿಭಾ ಎಲ್.ಸಾಮಗ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಕೋಟ ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ದೀಪಾ ಚಂದ್ರಕಾಂತ, ಉಮೇಶ್ ಆಚಾರ್ಯ, ಗಣೇಶ್ ಬ್ರಹ್ಮಾವರ, ಸುಧಾಕರ್ ಶೆಟ್ಟಿ, ವಸಂತ್, ಡಾ. ಸುಚರಿತ ರಾಜೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿ ಪ್ರಸ್ತಾಪಿಸಿದರು. ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್ ನಿರೂಪಿಸಿದರು.





