Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಹಕ್ಕು, ಕರ್ತವ್ಯಗಳ ರಕ್ಷಣೆ...

ಮಕ್ಕಳ ಹಕ್ಕು, ಕರ್ತವ್ಯಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಉಡುಪಿ ಜಿಲ್ಲಾ ನ್ಯಾಯಾಧೀಶ ಕಿರಣ್ ಗಂಗಣ್ಣನವರ್

ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ12 March 2025 10:09 PM IST
share
ಮಕ್ಕಳ ಹಕ್ಕು, ಕರ್ತವ್ಯಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಉಡುಪಿ ಜಿಲ್ಲಾ ನ್ಯಾಯಾಧೀಶ ಕಿರಣ್ ಗಂಗಣ್ಣನವರ್

ಉಡುಪಿ : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಸಂರಕ್ಷಣೆ ಮಾಡುವುದು ಸಹ ಪೋಷಕರು, ಅಧಿಕಾರಿಗಳು ಸೇರಿದಂತೆ ಸಮಸ್ತ ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ಹೇಳಿದ್ದಾರೆ.

ಬನ್ನಂಜೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಹಯೋಗದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ (ಪಿಎಸ್‌ಐ) ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಾಮಾಣಿಕತೆ ಎನ್ನುವುದು ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ಕುಟುಂಬದಲ್ಲಿ ಪೋಷಕರ ಭಿನ್ನಾಭಿಪ್ರಾಯಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರೊಂದಿಗೆ ಅವರುಗಳಲ್ಲಿ ಅಸುರಕ್ಷಿತ ಭಾವನೆ ಉಂಟು ಮಾಡುತ್ತದೆ. ಇದು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಇರುವ ಕಾನೂನು ಗಳನ್ನು ಉಲ್ಲಂಘಿಸಲು ಪ್ರೇರೇಪಿಸುತ್ತದೆ. ಹೀಗಾಗದಂತೆ ಮನೆಯ ಹಿರಿಯರು ಹಾಗೂ ಪೋಷಕರು ಎಚ್ಚರವಹಿಸಬೇಕು ಎಂದರು.

ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಕಾಯಿದೆಗಳಲ್ಲಿ ಅಡಕವಾಗಿರುವ ವ್ಯಕ್ತಿ ಹಾಗೂ ವ್ಯಕ್ತಿತ್ವಗಳು ನಮ್ಮವರೇ ಆಗಿರುತ್ತಾರೆ. ಕೆಟ್ಟ ಕೆಲಸಗಳನ್ನು ಮಾಡಿದವರ ವಿರುದ್ಧ ಸಾಕ್ಷಾಧಾರಗಳನ್ನು ಸಂಗ್ರಹಿಸುವ ಸಂದರ್ಭದಲ್ಲಿ ಮನಸ್ಸು ಮತ್ತು ವಿವೇಕದಿಂದ ಕೆಲಸಗಳನ್ನು ಮಾಡಿದಾಗ ಯಶಸ್ಸು ನಮ್ಮದಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಅಂತರಾತ್ಮ ಹಾಗು ಅಂತರ್‌ಚಕ್ಷುನಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರತೀ ತಿಂಗಳು ನಿರಂತರವಾಗಿ ಕಾರ್ಯಾಗಾರ ಗಳನ್ನು ಆಯೋಜಿಸಲಾಗುತ್ತಿದೆ. ಇಂತಹ ಕಾರ್ಯಾಗಾರಗಳು ಜ್ಞಾನವನ್ನು ಹೆಚ್ಚಿಸುವುದರೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಪೊಲೀಸರಿಗೆ ಸಹಕಾರಿಯಾಗುತ್ತದೆ ಎಂದರು.

ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಕುರಿತಾದ ಪ್ರಕರಣ ಗಳಲ್ಲಿ ಸೂಕ್ಷ್ಮವಾಗಿ ಯೋಚಿಸಿ, ವಿವೇಚನೆಯಿಂದ ಕಾನೂನಿನ ಅಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕು. ಹೀಗಾದಾಗ ಮಾತ್ರ ನೊಂದವರಿಗೆ ನ್ಯಾಯ ಸಿಗಲು ಸಾಧ್ಯ ಎಂದು ಡಾ.ಅರುಣ್ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಮಕ್ಕಳ ಸುತ್ತಮುತ್ತಲಿನ ಪರಿಸರವು ಅವರ ಮೇಲೆ ಒತ್ತಡ ಹೇರುವುದ ರೊಂದಿಗೆ ತಪ್ಪು ಮಾಡಲು ಅನುವು ಮಾಡಿಕೊಡುತ್ತದೆ. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳನ್ನು ಅನುಷ್ಠ್ಠಾನಗೊಳಿಸುವಾಗ ಮಕ್ಕಳನ್ನು ಅಪರಾಧಿಗಳಂತೆ ನೋಡದೇ ಅವರೊಂದಿಗೆ ಸೂಕ್ಷ್ಮವಾಗಿ ವರ್ತಿಸಿ, ಘಟನೆಗೆ ಕಾರಣ ತಿಳಿಯುವು ದರೊಂದಿಗೆ ಅವರು ತಪ್ಪನ್ನು ತಿದ್ದಿಕೊಂಡು ಸುಧಾರಣೆ ಹೊಂದಲು ದಾರಿ ಮಾಡಿಕೊಡಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಕಾಯ್ದೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ವಾಸ್ತವದ ನೆಲೆಯಲ್ಲಿ ಎದುರಿಸುವ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿಯ ಜಿಲ್ಲಾ ಅಧ್ಯಕ್ಷ ಮನುಪಟೇಲ್, ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ಪಿ.ಎ ಹೆಗಡೆ, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ವಿವಿಧ ಠಾಣೆಗಳ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಉಪಸ್ಥಿತರಿದ್ದರು.

ಹಿರಿಯ ಮಕ್ಕಳ ಪೋಲಿಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ ಸ್ವಾಗತಿಸಿ, ಆರಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X