Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮನ್‌ರೇಗಾದಲ್ಲಿ ಮಹಿಳೆಯರ...

ಮನ್‌ರೇಗಾದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಉಡುಪಿಯಲ್ಲಿ ರಾಜ್ಯದ ಸರಾಸರಿಗಿಂತ ಉತ್ತಮ: ಸಿಇಓ ಬಾಯಲ್

ವಾರ್ತಾಭಾರತಿವಾರ್ತಾಭಾರತಿ16 March 2025 5:59 PM IST
share
ಮನ್‌ರೇಗಾದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಉಡುಪಿಯಲ್ಲಿ ರಾಜ್ಯದ ಸರಾಸರಿಗಿಂತ ಉತ್ತಮ: ಸಿಇಓ ಬಾಯಲ್

ಬ್ರಹ್ಮಾವರ, ಮಾ.16: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಉಡುಪಿ ಜಿಲ್ಲೆಯಲ್ಲಿ ರಾಜ್ಯದ ಸರಾಸರಿಗಿಂತ ಉತ್ತಮವಾಗಿದೆ. ಇದರಲ್ಲಿ ಹೊಸತನದ ಅನುಷ್ಠಾನಕ್ಕೆ ಗರಿಷ್ಠ ಅವಕಾಶಗಳಿವೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಕಾಡೂರು ಗ್ರಾಮ ಪಂಚಾಯತ್‌ನಲ್ಲಿ ಶನಿವಾರ ಜರಗಿದ ನರೇಗಾ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ವೈಯಕ್ತಿಕ ಕಾಮಗಾರಿ ಗಳಿಗೆ ಹೆಚ್ಚು ಪ್ರಾಧಾನ್ಯತೆಯನ್ನು ನೀಡಲಾಗುತ್ತಿದೆ. ಸಮುದಾಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಮಾಜಿಕ ಜವಾಬ್ದಾರಿ ಹಾಗೂ ಗುಣಾತ್ಮಕ ಆಸ್ತಿ ಸೃಜನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಾಗಿದೆ ಎಂದರು.

ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, ಮನ್ ರೇಗಾ ಮತ್ತು ಸಂಜೀವಿನಿ ಯೋಜನೆಯಲ್ಲಿ ಅನಿಯಮಿತವಾದ ನಾವೀನ್ಯತೆಯ ಅವಕಾಶಗಳಿದ್ದು, ಹಲವು ಕುಟುಂಬಗಳ ಯಶೋಗಾಥೆ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಮಹಿಳಾ ಸ್ವಾವಲಂಬನೆ ಹಾಗೂ ಆರ್ಥಿಕ ಸುಸ್ಥಿರತೆಗೆ ಈ ಯೋಜನೆಗಳು ಸಹಕಾರಿಯಾಗಿದ್ದು, ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಸಬೇಕು. ಅಂತ ರ್ಜಲ ಅಭಿವೃದ್ಧಿ, ಪರಿಸರ ಸಂರಕ್ಷಣೆಗೆ ಮನ್‌ರೇಗಾ ಯೋಜನೆ ವರದಾನವಾಗಿದ್ದು, ಪ್ರತಿಯೊಂದು ಪಂಚಾಯತ್ ಈ ಬಗ್ಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕಾಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಲಂಧರ್ ಶೆಟ್ಟಿ ಮಾತನಾಡಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಯೋಜನೆ ರೂಪಿಸಿ, ಪ್ರತಿ ಹಂತದಲ್ಲಿ ಜವಾಬ್ದಾರಿಯೊಂದಿಗೆ ಕಾರ್ಯ ನಿರ್ವಹಿಸುವುದ ರಿಂದ ಯಾವುದೇ ಯೋಜನೆಯ ಯಶಸ್ವೀ ಅನುಷ್ಠಾನ ಸಾಧ್ಯವಿದೆ. ಮನ್ ರೇಗಾ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಕಾರ್ಯನಿರ್ವಹಿಸ ಬೇಕಾಗಿದೆ ಎಂದರು.

ಡಿಎಫ್‌ಓ ರವೀಂದ್ರ, ಬ್ರಹ್ಮಾವರ ತಾಪಂ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ, ಕಾಡೂರು ಗ್ರಾಪಂ ಉಪಾಧ್ಯಕ್ಷೆ ಪ್ರಭಾವತಿ, ಸದಸ್ಯರಾದ ವೀಣಾ, ಪಾಂಡುರಂಗ ಶೆಟ್ಟಿ, ಅಮಿತಾ ರಾಜೇಶ್, ಗುಲಾಬಿ, ವಿಜಯ ಮರಕಾಲ, ಸತೀಶ್ ಕುಲಾಲ್, ಗಿರಿಜಾ, ನರೇಗಾ ವಿಭಾಗದ ಶ್ಯಾಮ್ ಹಾಗೂ ಪ್ರಶಾಂತ, ಬ್ರಹ್ಮಾವರ ತಾಪಂ ವ್ಯಾಪ್ತಿಯ ಗ್ರಾಪಂಗಳ ಅಧ್ಯಕ್ಷರು ಮತ್ತು ಪಿಡಿಓ ಮತ್ತು ಸಿಬ್ಬಂದಿಗಳು, ಮನ್ ರೇಗಾ ಯೋಜನೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯಶೋಗಾಥೆಗಳ ಪ್ರದರ್ಶನದೊಂದಿಗೆ ಯೋಜನೆಯ ಫಲಾನುಭವಿಗಳು ಹಾಗೂ ಸಾಧಕ ಪಂಚಾಯತ್‌ ಗಳನ್ನು ಸನ್ಮಾನಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X