Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಲ್ಲವರು, ಮೊಗವೀರರು ಭಾವನಾತ್ಮಕವಾಗಿ...

ಬಿಲ್ಲವರು, ಮೊಗವೀರರು ಭಾವನಾತ್ಮಕವಾಗಿ ಒಂದಾಗಬೇಕು: ಜಿ.ಶಂಕರ್

ವಾರ್ತಾಭಾರತಿವಾರ್ತಾಭಾರತಿ16 March 2025 9:15 PM IST
share
ಬಿಲ್ಲವರು, ಮೊಗವೀರರು ಭಾವನಾತ್ಮಕವಾಗಿ ಒಂದಾಗಬೇಕು: ಜಿ.ಶಂಕರ್

ಉಡುಪಿ, ಮಾ.16: ಕರಾವಳಿಯಲ್ಲಿ ಬಿಲ್ಲವರು ಹಾಗೂ ಮೊಗವೀರರು ದೊಡ್ಡ ಶಕ್ತಿಯಾಗಿದ್ದಾರೆ. ಹಿಂದುಳಿದ ಜಾತಿಗಳಾಗಿರುವ ನಾವು ಸ್ವಾಭಿಮಾನಿ ಗಳಾಗಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯ ತೊರೆದು ರಾಜಕೀಯ ರಹಿತವಾಗಿ ಹಾಗೂ ಭಾವನಾತ್ಮಕವಾಗಿ ಒಂದಾಗಬೇಕು ಎಂದು ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಹೇಳಿದ್ದಾರೆ.

ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಹಾಗೂ ಯುವವಾಹಿನಿ ಉಡುಪಿ ಘಟಕದ ಸಹಯೋಗದೊಂದಿಗೆ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್‌ನ ಜಗದ್ಗುರು ಪೀಠದ ಪೀಠಾಧೀಶ 1008 ಮಹಾ ಮಂಡಲೇಶ್ವರ ಸದ್ಗುರು ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಗೌರವ ಅಭಿನಂದನಾ ಕಾರ್ಯಕ್ರಮ ಮಹಾಭಿವಂದ್ಯ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬಿಲ್ಲವರು, ಮೊಗವೀರರು ಸೇರಿದಂತೆ ಎಲ್ಲ ಹಿಂದುಳಿದ ಜಾತಿಯವರು ರಾಮಕ್ಷೇತ್ರದ ಸ್ವಾಮೀಜಿಗೆ ಶಕ್ತಿ ತುಂಬುವ ಕಾರ್ಯ ಮಾಡಬೇಕು. ಬಿಲ್ಲವ ಸಮುದಾಯ ಸಣ್ಣಪುಟ್ಟ ಭಿನ್ನಾಭಿಪ್ರಾಯ ತೊರೆದು ತಮ್ಮ ಸಮುದಾಯದ ಸ್ವಾಮೀಜಿಯನ್ನು ಒಗ್ಗಟ್ಟಾಗಿ ಸ್ವೀಕರಿಸಬೇಕು ಎಂದರು.

ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯನ್ನು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಅಭಿನಂದಿಸಿದರು. ಮಾಜಿ ಶಾಸಕ ಕೆ.ರಘುಪತಿ ಭಟ್ ಅಭಿನಂದನಾ ನುಡಿಗಳನ್ನಾಡಿದರು. ಅಧ್ಯಕ್ಷತೆ ಯನ್ನು ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ ಅಧ್ಯಕ್ಷ ಓಬು ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾ ಧಿಕಾರಿ ಪದ್ಮರಾಜ್ ಆರ್., ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಉಪಸ್ಥಿತರಿದ್ದರು.

ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಭಾಸ್ಕರ ಸುವರ್ಣ ವಂದಿಸಿದರು. ತೇಜಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X