ಪ್ರತ್ಯೇಕ ಪ್ರಕರಣ: ಅಪರಿಚಿತ ಸಹಿತ ನಾಲ್ವರ ಆತ್ಮಹತ್ಯೆ

ಬ್ರಹ್ಮಾವರ, ಮಾ.17: ವಿಪರೀತ ಮಧ್ಯಪಾನ ಸೇವಿಸುವ ಚಟ ಹೊಂದಿದ್ದ ಕಚ್ಚೂರು ಗ್ರಾಮದ ಸಂತೋಷ್(42) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಮಾ.16ರಂದು ಬೆಳಗ್ಗೆ ಮನೆಯ ಬಚ್ಚಲು ಕೋಣೆಯಲ್ಲಿ ಹರಿತವಾದ ಆಯುಧದಿಂದ ತನ್ನ ಮರ್ಮಾಂಗವನ್ನು ಕೊಯ್ದಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ: ಅನಾರೋಗ್ಯದಿಂದ ಬಳಲುತ್ತಿದ್ದ ಕುಳುಂಜೆ ಗ್ರಾಮದ ಮಂಜು ಎಂಬವರ ಮಗ ರಾಜೇಶ(35) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.16ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಚಾಂತಾರು ಗ್ರಾಮದ ಹಾಲು ಡೈರಿ ಹತ್ತಿರ ಮಾ.16ರಂದು ಸಂಜೆ ವೇಳೆ ಉಡುಪಿಯಿಂದ ಬಾರ್ಕೂರು ಕಡೆಗೆ ಹೋಗುತ್ತಿದ್ದ ಮತ್ಯಾಗಂಧ ರೈಲಿಗೆ 25 ರಿಂದ 35ಪ್ರಾಯದ ಅಪರಿಚಿತ ವ್ಯಕ್ತಿ ಯೊಬ್ಬರು ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಪತಿಯ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕುದಿ ಗ್ರಾಮದ ಸವಿತಾ ಆರ್.(39) ಎಂಬವರು ಮಾ.17ರಂದು ಬೆಳಗ್ಗೆ ಕೋಣೆಯ ಹಿಂಬದಿಯ ಕಿಟಕಿಯ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.







