Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಾಕೃತಿಕ ವಿಕೋಪದಿಂದ ಪಾರಾಗಲು ಉಡುಪಿ...

ಪ್ರಾಕೃತಿಕ ವಿಕೋಪದಿಂದ ಪಾರಾಗಲು ಉಡುಪಿ ಜಿಲ್ಲಾಡಳಿತದಿಂದ ಸಲಹೆ, ಸೂಚನೆಗಳು

ವಾರ್ತಾಭಾರತಿವಾರ್ತಾಭಾರತಿ17 March 2025 9:30 PM IST
share
ಪ್ರಾಕೃತಿಕ ವಿಕೋಪದಿಂದ ಪಾರಾಗಲು ಉಡುಪಿ ಜಿಲ್ಲಾಡಳಿತದಿಂದ ಸಲಹೆ, ಸೂಚನೆಗಳು

ಉಡುಪಿ, ಮಾ.17: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಪ್ರಾರಂಭಗೊಳ್ಳಲು ಕೆಲವೇ ದಿನಗಳಿವೆ. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಗಿನ ಸಲಹೆ ಹಾಗೂ ಸೂಚನೆಗಳನ್ನು ಸಾರ್ವಜನಿಕರಿಗೆ ನೀಡಿದೆ.

ಗುಡುಗು-ಸಿಡಿಲಿನ ಸಂದರ್ಭ: ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡ ಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು ಉತ್ತಮ. ವಾಹನ ಚಾಲನೆ ಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯ ಬೇಕು.

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ವನ್ನು ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿ ದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.

ಹೊರಗೆ ಹೋಗುವ ಅನಿವಾರ್ಯತೆ ಇದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಛರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿ, ಸುರಕ್ಷಿತ ಎನಿಸಿದ್ದಲ್ಲಿ ಮಾತ್ರ ಹೊರಗೆ ತೆರಳಬೇಕು. ವಿದ್ಯುತ್, ಟೆಲಿಫೋನ್ ಕಂಬಗಳು ಅಥವಾ ಮರಗಳು ಮಿಂಚನ್ನು ಆರ್ಕಷಿಸುವುದರಿಂದ ಇವುಗಳ ಕೆಳಗೆ ಅಶ್ರಯ ಪಡೆಯಬಾರದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರ ಗಳು ಇತ್ಯಾದಿಗಳಿಂದ ದೂರವಿರಬೇಕು.

ಸಿಡಿಲು ಬರುವ ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದು ಸೂಕ್ತವಲ್ಲ. ಕಬ್ಬಿಣದ ಸರಳು ಗಳಿಂದ ಕೂಡಿದ ಕೊಡೆ/ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲು ಗಳನ್ನು ಮುಚ್ಚಬೇಕು ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು ಸೂಕ್ತ. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಬರುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.

ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣ ವನ್ನು ಮುಂದೂಡಬೇಕು. ಈ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳಲ್ಲಿ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗು ವುದನ್ನು ಆದಷ್ಟು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳ ದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಕೆಲವು ಸಲ ಮಿಂಚಿನ ಹೊಡೆತದಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು.

ತುರ್ತು ಸೇವೆಗೆ ಶುಲ್ಕರಹಿತ: 1077 ಅಥವಾ ದೂರವಾಣಿ ಸಂಖ್ಯೆ: 0820-2574802 ಅನ್ನು ಸಂಪರ್ಕಿ ಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X