Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೈಕ್ರೋಫೈನಾನ್ಸ್, ಲೇವಾದೇವಿ ಸಂಸ್ಥೆಗಳ...

ಮೈಕ್ರೋಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ20 March 2025 8:25 PM IST
share
ಮೈಕ್ರೋಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವಾದೇವಿ ವ್ಯವಹಾರಸ್ಥರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ಪ್ರತಿಬಂಧಕ) ಆದೇಶ-2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ಗಳು, ಸಾಲ ನೀಡಿಕೆ ಏಜೆನ್ಸಿ ಹಾಗೂ ಲೇವಾ ದೇವಿದಾರರು ನೀಡುವ ದುಬಾರಿ ಬಡ್ಡಿಗಳಿಂದ ಜನರು ತೊಂದರೆಗೊಳಗಾ ಗುವುದರ ಜೊತೆಗೆ ಕೆಲವು ಸಂಸ್ಥೆಗಳು ಬಲವಂತ ವಾಗಿ ವಸೂಲಾತಿ ಸಾಲ ಮಾಡುತ್ತಿವೆ. ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು, ಆರ್ಥಿಕ ದುರ್ಬಲರ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ನಡೆಸುವ ಪ್ರಕರಣಗಳು ಸಂಭವಿಸುತ್ತಿರುವ ಹಿನ್ನೆಲೆ ಯಲ್ಲಿ, ಇವುಗಳ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆದ್ಯಾದೇಶ -2025 ಜಾರಿಗೆ ಬಂದಿದ್ದು, ಇದರನ್ವಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸು ತ್ತಿರುವ ಇಂಥ ಸಂಸ್ಥೆಗಳು ಕಡ್ಡಾಯವಾಗಿ ಮೂವತ್ತು ದಿನಗಳ ಒಳಗೆ ಸೂಕ್ತ ಪ್ರಾಧಿಕಾರದ ಮುಂದೆ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫೈನಾನ್ಸ್‌ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಆಗಾಗ್ಗೆ ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದ ಜಿಲ್ಲಾಧಿಕಾರಿ, ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ತೊಂದರೆ ನೀಡುವ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಇಂಥ ಸಂಸ್ಥೆಗಳು ಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ಪಾಲಿಸದೇ ಇರುವುದೇ ಇದಕ್ಕೆ ಕಾರಣ ಎಂದರು.

ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೋಫೈನಾನ್ಸ್‌ಗಳು ನಿಗದಿತ ಮೊತ್ತದವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಕರ್ನಾಟಕ ಸರಕಾರದ ಹೊಸ ಆದೇಶದಂತೆ ಸಾಲಗಾರನನ್ನು ಅಥವಾ ಅವರ ಕುಟುಂಬದ ಸದಸ್ಯರಿಗೆ ಒತ್ತಡ ಹಾಕುವುದು, ತಡೆಯೊಡ್ಡುವುದು, ಹಿಂಸೆಯನ್ನು ಬಳಸುವುದು, ಬೆದರಿಸು ವುದು, ಅವರನ್ನು ನಿರಂತರವಾಗಿ ಹಿಂಬಾಲಿಸುವುದು, ಸ್ವತ್ತಿನ ಬಳಕೆಗೆ ಅಡ್ಡಿಪಡಿಸುವುದು, ಹಣ ಪಾವತಿಗೆ ಬಲವಂತ ಹಾಗೂ ಅನುಚಿತ ಪ್ರಭಾವ ವನ್ನು ಬಳಸುವುದು ಸೇರಿದಂತೆ ಯಾವುದೇ ದೌರ್ಜನ್ಯಗಳನ್ನು ಸಾಲಗಾರನಿಂದ ಹಣ ವಸೂಲಾತಿಗಾಗಿ ಸ್ವತಹ ಅಥವಾ ಏಜೆಂಟರ್‌ಗಳ ಮೂಲಕ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಒಂದು ವೇಳೆ ದೌರ್ಜನ್ಯ, ದಬ್ಬಾಳಿಕೆಯಂತಹ ಪ್ರಕರಣಗಳು ನಡೆದಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ರಾಜ್ಯ ಸರಕಾರ ಜಾರಿಗೆ ತಂದಿರುವ ಹೊಸ ನಿಯಮಗಳ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ, ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರು, ಲೇವಾದೇವಿಗಾರರು ಹಾಗೂ ಇತರರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X