Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೂಮಾಲಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್...

ಭೂಮಾಲಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ವಾರದೊಳಗೆ ಆಧಾರ್ ಲಿಂಕ್‌ಗೆ ಉಡುಪಿ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 April 2025 7:35 PM IST
share
ಭೂಮಾಲಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ವಾರದೊಳಗೆ ಆಧಾರ್ ಲಿಂಕ್‌ಗೆ ಉಡುಪಿ ಡಿಸಿ ಸೂಚನೆ

ಉಡುಪಿ, ಎ.3: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85ರಷ್ಟು ಮಾತ್ರ ಪ್ರಗತಿಯಾಗಿದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಪಹಣಿಗೆ ಆಧಾರ ಜೋಡಣೆಯಲ್ಲಿ ಜಿಲ್ಲೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆ ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನ ದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್‌ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿ ಅವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಅಥವಾ ವಿದೇಶಗಳಲ್ಲಿ ವಾಸವಿರುವ ಭೂಮಾಲಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸ ಬೇಕು. ಈ ಕಾರ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಯಾವುದೇ ಸೈಬರ್ ಅಥವಾ ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲಕರು ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X