Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿರುವ...

"ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿರುವ ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು"

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 April 2025 5:22 PM IST
share
ಸಾಂವಿಧಾನಿಕ ಆಶಯಗಳಿಗೆ ವಿರುದ್ಧವಾಗಿರುವ ವಕ್ಫ್ ಕಾಯ್ದೆಗೆ ರಾಷ್ಟ್ರಪತಿ ಅಂಕಿತ ಹಾಕಬಾರದು

ಉಡುಪಿ: ನರೇಂದ್ರ ಮೋದಿ ಸರಕಾರ ತಂದಿರುವ ವಕ್ಫ್ ತಿದ್ದುಪಡಿ ಮಸೂದೆ ನಮ್ಮ ದೇಶದ ಸಂವಿಧಾ ನದ ಮೂಲ ಆಶಯಗಳಿಗೆ ವಿರುದ್ಧವಾಗಿರುವ ಮಸೂದೆಯಾಗಿದೆ. ಇದು ವಕ್ಫ್ ಸೊತ್ತುಗಳನ್ನು ಸಂರಕ್ಷಿ ಸುವ, ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುವ ಹೆಸರಿನಲ್ಲಿ ವಕ್ಫ್ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವ ಹುನ್ನಾರವಾಗಿದೆ. ಈ ಸಂವಿಧಾನ ವಿರೋಧಿ ಮಸೂದೆಗೆ ರಾಷ್ಟ್ರಪತಿಯವರು ಅಂಕಿತ ಹಾಕಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಮೌಲಾ ಆಗ್ರಹಿಸಿದ್ದಾರೆ.

ಬಿಜೆಪಿ, ಸಂಘ ಪರಿವಾರ ಹಾಗೂ ಅವರ ಐಟಿ ಸೆಲ್ ಮೊದಲು ಮುಸ್ಲಿಮರು ಹಾಗು ವಕ್ಫ್ ಭೂಮಿ ಕುರಿತು ವ್ಯವಸ್ಥಿತ ಅಪಪ್ರಚಾರ ಅಭಿಯಾನ ನಡೆಸುತ್ತಾರೆ. ವಕ್ಫ್ ಸೊತ್ತುಗಳ ಬಗ್ಗೆ ಹಸಿ ಹಸಿ ಸುಳ್ಳುಗಳನ್ನು ಹರಡುತ್ತಾರೆ. ಆ ಮೂಲಕ ಸಮಾಜದಲ್ಲಿ, ದೇಶದಲ್ಲಿ ಮುಸ್ಲಿಮರು ಹಾಗು ವಕ್ಫ್ ವಿರುದ್ಧ ಒಂದು ಸುಳ್ಳು ನರೇಟಿವ್ ಅನ್ನು ಸೃಷ್ಟಿಸುತ್ತಾರೆ. ಅದರ ಬೆನ್ನಿಗೇ ಇಂತಹದೊಂದು ಸಂವಿಧಾನ ವಿರೋಧಿ, ಜಾತ್ಯತೀತ ತತ್ವಗಳ ವಿರೋಧಿ ಮಸೂದೆಯನ್ನು ಸಂಸತ್ತಿನಲ್ಲಿ ತಂದು ಪಾಸ್ ಮಾಡುತ್ತಾರೆ. ಅದಕ್ಕಾಗಿ ತಥಾಕತಿಥ ಜಾತ್ಯತೀತ ಪಕ್ಷಗಳ ಬೆಂಬಲವನ್ನೂ ಪಡೆದು ಅವುಗಳ ಬಂಡವಾಳವನ್ನು ಬಯಲು ಮಾಡುತ್ತಾರೆ. ಇದು ಈಗಾಗಲೇ ಮೋದಿ ಸರಕಾರ ಹಾಗು ಸಂಘ ಪರಿವಾರದ ದ್ವೇಷ ರಾಜಕೀಯದಿಂದ ಅಂಚಿಗೆ ತಳ್ಳಲ್ಪಟ್ಟಿ ರುವ ಮುಸ್ಲಿಂ ಸಮುದಾಯವನ್ನು ಇನ್ನಷ್ಟು ಗುರಿಯಾಗಿಸುವ, ಅವರನ್ನು ‘ಅನ್ಯರು’ ಎಂಬಂತೆ ಬಿಂಬಿಸುವ, ಅವರ ವಕ್ಫ್ ಸೊತ್ತುಗಳನ್ನು ಆಕ್ರಮಿಸುವ ಹುನ್ನಾರವಲ್ಲದೆ ಬೇರೇನೂ ಅಲ್ಲ ಎಂದು ಒಕ್ಕೂಟ ಆರೋಪಿಸಿದೆ.

ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುತ್ತೇವೆ, ವಕ್ಫ್ ಸೊತ್ತನ್ನು ಸಮರ್ಪಕವಾಗಿ ಮುಸ್ಲಿಮರ ಪ್ರಯೋಜನಕ್ಕಾಗಿ ಬಳಸುತ್ತೇವೆ, ಭ್ರಷ್ಟಾಚಾರವನ್ನು ನಿಗ್ರಹಿಸುತ್ತೇವೆ ಎಂದು ಹೇಳುತ್ತಿರುವ ಮೋದಿ ಸರಕಾರ ಈ ಮಸೂದೆಯಲ್ಲಿ ಅದಕ್ಕೆ ತೀರಾ ತದ್ವಿರುದ್ಧವಾದ ಅಂಶಗಳನ್ನೇ ಯಾಕೆ ತಂದಿದೆ ಎಂಬುದಕ್ಕೆ ಉತ್ತರ ನೀಡಬೇಕಿದೆ. ವಕ್ಫ್ ಬೋರ್ಡ್ ಅನ್ನು ಹಾಗು ವಕ್ಫ್ ನ್ಯಾಯ ಮಂಡಳಿಯನ್ನು ದುರ್ಬಲವಾಗಿಸುವ ಮೂಲಕ ಹೇಗೆ ವಕ್ಫ್ ಆಡಳಿತವನ್ನು ದಕ್ಷವಾಗಿಸಲು ಸಾಧ್ಯ? ಹೇಗೆ ವಕ್ಫ್ ಸೊತ್ತುಗಳನ್ನು ರಕ್ಷಿಸಲು ಸಾಧ್ಯ? ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವುದೂ ಈ ಸರಕಾರದ ದುರುದ್ದೇಶದಿಂದಲೇ ಆಗಿದೆ. ಈ ದೇಶದ ಬೇರಾವುದೇ ಧರ್ಮದ ಧಾರ್ಮಿಕ ಮಂಡಳಿಗಳಲ್ಲಿ ಆ ಧರ್ಮದವರಲ್ಲದೆ ಬೇರೆ ಧರ್ಮ ದವರನ್ನು ಸೇರಿಸುವ ನಿಯಮ ಇಲ್ಲದಿರುವಾಗ ಮುಸ್ಲಿಮರ ವಕ್ಫ್ ಮಂಡಳಿಯಲ್ಲಿ ಮಾತ್ರ ಮುಸ್ಲಿಮೇತ ರರೂ ಇರಬೇಕು ಎಂಬುದು ತೀರಾ ಸಂವಿಧಾನ ವಿರೋಧಿ ಕ್ರಮವಾಗಿದೆ.

ನಮ್ಮ ಸರಕಾರದಲ್ಲಿ ಯಾವುದೇ ಧಾರ್ಮಿಕ ತಾರತಮ್ಯ ಇಲ್ಲ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾಷಣ ಮಾಡುವ ಪ್ರಧಾನಿ ಮೋದಿ, ವಕ್ಫ್ ಮಸೂದೆಯಲ್ಲಿ ಎದ್ದು ಕಾಣುವಂತಹ ತಾರತಮ್ಯದ ನೀತಿಗಳನ್ನೇ ಸೇರಿಸಿ ರುವುದು ವಿಪರ್ಯಾಸವಾಗಿದೆ. ಮೋದಿ ಸರಕಾರ ಮುಸ್ಲಿಮರ ವಿಚಾರದಲ್ಲಿ ಹೇಳುವುದು ಒಂದು, ಮಾಡುವುದು ಮಾತ್ರ ಅದಕ್ಕೆ ತದ್ವಿರುದ್ಧವಾದುದು ಎಂಬುದು ವಕ್ಫ್ ಮಸೂದೆಯಲ್ಲಿ ಇನ್ನೊಮ್ಮೆ ಸಾಬೀತಾಗಿದೆ. ಪ್ರಧಾನಿಯವರು ಭಾಷಣಗಳಲ್ಲಿ ಹೇಳುವಂತೆ ಅವರು ನಿಜವಾಗಿಯೂ ಮುಸ್ಲಿಂ ಸಮುದಾಯದ ಬಗ್ಗೆ ಪ್ರಾಮಾಣಿಕ ಕಾಳಜಿ ಉಳ್ಳವರು ಎಂದಾದರೆ ಈ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪುನರ್ ವಿಮರ್ಶೆ ನಡೆಸಬೇಕು ಹಾಗು ಸದರಿ ಕಾಯ್ದೆಗೆ ಸಹಿ ಮಾಡದೆ ಪುನರಾವ ಲೋಕನಕ್ಕಾಗಿ ಸರಕಾರಕ್ಕೆ ಹಿಂತಿರುಗಿಸಬೇಕೆಂದು ರಾಷ್ಟ್ರಪತಿ ಯವರಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಪ್ರಕಟಣೆಯಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X