Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾಸ್ಪತ್ರೆ ನೂತನ ಕಟ್ಟಡ...

ಉಡುಪಿ ಜಿಲ್ಲಾಸ್ಪತ್ರೆ ನೂತನ ಕಟ್ಟಡ ಕಾಮಗಾರಿ ಸ್ಥಗಿತ!

ಅನುದಾನದ ಕೊರತೆ: 6.5ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾಪ

ವಾರ್ತಾಭಾರತಿವಾರ್ತಾಭಾರತಿ6 April 2025 5:54 PM IST
share
ಉಡುಪಿ ಜಿಲ್ಲಾಸ್ಪತ್ರೆ ನೂತನ ಕಟ್ಟಡ ಕಾಮಗಾರಿ ಸ್ಥಗಿತ!

ಉಡುಪಿ, ಎ.6: ಕಳೆದ ಡಿಸೆಂಬರ್ ತಿಂಗಳಲ್ಲಿಯೇ ಪೂರ್ಣಗೊಂಡು ಉದ್ಘಾಟನೆಗೊಳ್ಳಬೇಕಾಗಿದ್ದ ಉಡುಪಿ ಜಿಲ್ಲಾಸ್ಪತ್ರೆ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನದ ಅಗತ್ಯ ಇದೆ. ಈ ಕುರಿತು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇನ್ನೂ ಹೆಚ್ಚುವರಿ ಅನುದಾನ ಬಿಡುಗಡೆಯಾಗಿಲ್ಲ. ಈ ಕಾರಣದಿಂದ ಸದ್ಯ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ.

ಶಿಲಾನ್ಯಾಸ ನೆರವೇರಿಸಿ ಮೂರುವರೆ ವರ್ಷಗಳು ಕಳೆದರೂ ಕಟ್ಟಡ ಕಾಮಗಾರಿ ಇನ್ನೂ ಪೂರ್ಣ ಗೊಂಡಿಲ್ಲ. ಎಸ್‌ಟಿಪಿ ನಿರ್ಮಾಣ, ಆಪರೇಶನ್ ಥಿಯೇಟರ್ ಇಂಟಿರೀಯರ್, ರಸ್ತೆ ಸೇರಿದಂತೆ ಸುಮಾರು 6.5 ಕೋಟಿ ರೂ. ವೆಚ್ಚದ ಬಾಕಿ ಕಾಮಗಾರಿಗಳು ಇನ್ನೂ ಬಾಕಿ ಉಳಿದಿವೆ. ಹಾಗಾಗಿ ಬಾಕಿ ಕಾಮಗಾರಿ ಗಳಿಗೆ ಅನುದಾನ ಬಿಡುಗಡೆ ಮಾಡಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷ ಸಂದರೂ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಇರಲಿಲ್ಲ. 135 ಬೆಡ್‌ಗಳಿರುವ ಅಜ್ಜರಕಾಡು ತಾಲೂಕು ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿತ್ತು. 2020ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 250 ಬೆಡ್‌ಗಳ ಹೊಸ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 115 ಕೋಟಿ ರೂ. ಮಂಜೂರುಗೊಳಿಸಿದ್ದರು. 2021, ಆಗಸ್ಟ್‌ನಲ್ಲಿ ಆಗಿನ ಮುಖ್ಯಮಂತ್ರಿ ಬೊಮ್ಮಾಯಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು.

ಕಟ್ಟಡಕ್ಕೆ 115 ಕೋಟಿ ರೂ. ಹಾಗೂ ಸಿಬ್ಬಂದಿ, ಪೀಠೋಪಕರಣ, ಅಗತ್ಯ ಮೂಲಸೌಕರ್ಯ ಸೇರಿ ಒಟ್ಟು 150 ಕೋಟಿ ರೂ. ವೆಚ್ಚ ಅಂದಾಜಿಸ ಲಾಗಿದ್ದರೂ ಕಾಮಗಾರಿ ವಿಳಂಬದಿಂದ ಪ್ರಸ್ತಾವಿತ ಕಟ್ಟಡಕ್ಕೆ ಸುಮಾರು 140 ಕೋಟಿ ರೂ. ಖರ್ಚಾಗಿದೆ. ಮೇ ಒಳಗೆ ಟೆಂಡರ್‌ನಲ್ಲಿ ಉಲ್ಲೇಖಿಸಿದ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳಲಿದೆ.

ಈ ಮಧ್ಯೆ ಕೇಂದ್ರ ಸರಕಾರದ 50 ಬೆಡ್‌ಗಳ ಕ್ರಿಟಿಕಲ್ ಕ್ಯಾರ್ ಸೆಂಟರ್ ಉಡುಪಿಗೆ ಮಂಜೂರಾಗಿದ್ದು, ಹೊಸ ಕಟ್ಟಡದ 2ನೇ ಮಹಡಿಯಲ್ಲಿ ಜಾಗ ನಿಗದಿಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಸುಮಾರು 8.5 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗಾಗಿ ಟೆಂಡರ್ ಕರೆಯಲಾಗಿದ್ದು, ಕೆಲಸ ಪೂರ್ಣ ಗೊಳ್ಳಲು ಕನಿಷ್ಠ 6 ತಿಂಗಳು ಬೇಕಾಗಬಹುದು. ಹೀಗಾಗಿ ಹೊಸ ಆಸ್ಪತ್ರೆಯು ಈ ವರ್ಷಾಂತ್ಯಕ್ಕೆ ಜನರ ಸೇವೆಗೆ ತೆರೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ಆಸ್ಪತ್ರೆಗೆ ವಿವಿಧ ಪರಿಕರಗಳ ಖರೀದಿಗೆ ಸುಮಾರು 16 ಕೋಟಿ ರೂ. ಹಾಗೂ ವೈದ್ಯರು, ದಾದಿಯರು, ಲ್ಯಾಬ್ ಟೆಕ್ನೀಶಿಯನ್ಸ್, ಡಿಗ್ರೂಪ್ ನೌಕರರ ನೇಮಕಾತಿ, ಸಂಬಳ, ಭತ್ಯೆಗಳಿಗಾಗಿ ಸುಮಾರು 17 ಕೋಟಿ ರೂ. ಸೇರಿದಂತೆ 33 ಕೋಟಿ ರೂ. ಅನುದಾನ ಬಿಡುಗಡೆಗೆ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ.

ಜೊತೆಗೆ ಮುಖ್ಯ ಟೆಂಡರ್ ಹೊರತಾದ ಅಗತ್ಯ ಕಾಮಗಾರಿಗಳಿಗೆ 6.5 ಕೋಟಿ ರೂ. ಸೇರಿ ಆಸ್ಪತ್ರೆ ಕಾರ್ಯಾರಂಭ ಮಾಡಲು ಇನ್ನೂ 40 ಕೋಟಿ ರೂ. ಅನುದಾನದ ಅಗತ್ಯವಿದೆ. ರಾಜ್ಯ ಸರಕಾರ ಶೀಘ್ರಗತಿಯಲ್ಲಿ ಅನುದಾನ ಮಂಜೂರು ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X