Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು...

ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಆದ್ಯತೆ ನೀಡಿ: ಕೆ.ಅಣ್ಣಾಮಲೈ

ಪಿಪಿಸಿಯಲ್ಲಿ ಅ.ಭಾ. ಅಂತರ ವಿವಿ ಪುರುಷರ ಖೋ-ಖೋ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ9 April 2025 9:11 PM IST
share
ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಆದ್ಯತೆ ನೀಡಿ: ಕೆ.ಅಣ್ಣಾಮಲೈ

ಉಡುಪಿ, ಎ.9: ಕ್ರೀಡಾ ಸಾಧನೆ ಆರೋಗ್ಯವಂತ ಸಮಾಜದ ಹೆಗ್ಗುರುತು. ದೇಶದಲ್ಲಿ ಕ್ರೀಡಾ ಸಂಸ್ಕೃತಿ ಯನ್ನು ಬೆಳೆಸುವ ಮೂಲಕ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. 2036ರಲ್ಲಿ ದೇಶದಲ್ಲಿ ಮೊದಲ ಬಾರಿ ಒಲಿಂಪಿಕ್ಸ್ ಕ್ರೀಡೆಯನ್ನು ಸಂಘಟಿಸುವ ಗುರಿ ಹೊಂದಿರುವ ನಮಗೆ ಇದು ಆದ್ಯತೆಯಾಗಬೇಕು ಎಂದು ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ನೂತನವಾಗಿ ಜರ್ಮನ್ ಹ್ಯಾಂಗರ್ ತಂತ್ರಜ್ಞಾನದಲ್ಲಿ ನಿರ್ಮಾಣ ಗೊಂಡಿರುವ ಶ್ರೀವಿಬುಧೇಶತೀರ್ಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಗೊಂಡ 2024-25ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಚಾಂಪಿಯನ್‌ಷಿಪ್‌ನ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಚೀನಾ ತನ್ನ ನೆಲದಲ್ಲಿ ಮೊದಲ ಬಾರಿ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಿದಾಗ, ಪದಕ ಪಟ್ಟಿ ಯಲ್ಲಿ ಮೊದಲ ಬಾರಿಗೆ ಅಮೆರಿಕದ ಏಕಸ್ವಾಮ್ಯವನ್ನು ಮುರಿದಿತ್ತು. ಅದೇ ರೀತಿ ನಾವು ಸಹ ಸುಸ್ಥಿರವಾದ ಕ್ರೀಡಾ ಸಂಸ್ಕೃತಿಯನ್ನು ಭಾರತೀಯರಲ್ಲಿ ಅಳವಡಿಸಿಕೊಳ್ಳುವ ಮೂಲಕ ಕನಿಷ್ಠ್ಠ 150ರಿಂದ 200 ಪದಕ ಗೆಲ್ಲುವ ಗುರಿಯೊಂದಿಗೆ 2036ರ ಒಲಿಂಪಿಕ್ಸ್‌ನ್ನು ಆಯೋಜಿಸಲು ಯೋಜನೆ ರೂಪಿಸಬೇಕು ಎಂದರು.

ಉಡುಪಿ ಶ್ರೀಅದಮಾರು ಮಠದ ಯತಿವರ್ಯರಾದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಅಖಿಲ ಭಾರತ ಮಟ್ಟದಲ್ಲಿ ನಾಲ್ಕು ವಲಯಗಳಿಂದ ಬಂದಿರುವ ದೇಶದ ಬಲಿಷ್ಠ 16 ವಿವಿ ತಂಡಗಳು ಪಾಲ್ಗೊಂಡಿರುವ ಟೂರ್ನಿಗೆ ಚಾಲನೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಮಂಗಳೂರಿನ ಕರ್ಣಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣನ್ ಎಚ್, ಉಡುಪಿ ಅದಮಾರು ಮಠ ಶಿಕ್ಷಣ ಸಂಸ್ಥೆ ಬೆಂಗಳೂರಿನ ಗೌರವ ಕಾರ್ಯದರ್ಶಿ ಡಾ.ಎ.ಪಿ.ಭಟ್, ಕಾಲೇಜು ಆಡಳಿತ ಮಂಡಳಿಯ ಗೌರವ ಖಜಾಂಜಿ ಸಿ.ಎ.ಪ್ರಶಾಂತ್ ಹೊಳ್ಳ, ಪೂರ್ಣಪ್ರಜ್ಞ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಶ್ರೀರಮಣ ಐತಾಳ್, ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಕಿಶೋರ್ ಕುಮಾರ್ ಸಿ.ಕೆ., ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಟೂರ್ನಿ ಸಂಘಟನಾ ಕಾರ್ಯದರ್ಶಿ ಯಾಗಿರುವ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿದೇರ್ಶಕ ಸುಕುಮಾರ್ ಉಪಸ್ಥಿತರಿದ್ದರು.

ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್ ಚಂದ್ರಶೇಖರ್ ಸ್ವಾಗತಿಸಿದರು. ಪ್ರಾಂಶುಪಾಲರಾದ ಡಾ. ರಾಮು ಎಲ್. ವಂದಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ ಹೆಗಡೆ ಪ್ರಾರ್ಥಿಸಿದರೆ, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ಶೆಟ್ಟಿ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X